BREAKING : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ದಿಢೀರ್ ಏರುಪೇರು..!

ಈ ಸುದ್ದಿಯನ್ನು ಶೇರ್ ಮಾಡಿ

Siddaganga-Swamiji--01

ತುಮಕೂರು,ಜ.21-ಸಿದ್ದಗಂಗಾ ಶ್ರೀಗಳ ಆರೋಗ್ಯ ದಿನೆ ದಿನೇ ಸುಧಾರಿಸುತ್ತಿತ್ತು ಎನ್ನಲಾಗಿತ್ತು, ಆದರೆ ಇಂದು ದಿಢೀರ್ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗುತ್ತಿದೆ.

ಇನ್ನು ಮಠದ ಸುತ್ತಮುತ್ತ ಪೊಲೀಸ್ ಭಿಗಿಭದ್ರೆಯನ್ನು ಇದ್ದಕ್ಕಿದ್ದಂತೆ ಹೆಚ್ಚಿಸಲಾಗಿದ್ದು, ಭಾರಿ ಸಂಖ್ಯೆಯಲ್ಲಿ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ. ಮತ್ತು ಬೇರೆ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇದರಿಂದಾಗಿ ಭಕ್ತರಲ್ಲಿ ಆತಂಕ ಮೂಡುವಂತೆ ಮಾಡಿದೆ.

ಇದಲ್ಲದೆ ತುಮಕೂರು  ಮಾರ್ಗಗಳನ್ನು ಬದಲಾವಣೆ ಮಾಡಿದ್ದು, ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಮಠದಲ್ಲಿ ನೀರವ ಮೌನ ಆವರಿಸಿದ್ದು ನಡೆದಾಡುವ ದೇವರ ಆರೋಗ್ಯದ ಬಗ್ಗೆ ಸ್ಪಷ್ಟ ಮಾಹಿತಿ ಸಿಗದೇ ಭಕ್ತರು ಕಂಗಾಲಾಗಿದ್ದಾರೆ.

ಸದ್ಯದಲ್ಲೇ ವೈದ್ಯರು ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಗಾಗಿ ಭಕ್ತರು ಕಾಯುತ್ತಿದ್ದಾರೆ. ಶಿವಕುಮಾರ ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Facebook Comments

Sri Raghav

Admin