ಜ.23-24ರಂದು ರಾಯ್‍ಬರೇಲಿ, ಅಮೇಥಿಗೆ ಸೋನಿಯಾ, ರಾಹುಲ್ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Rahul--01

ನವದೆಹಲಿ, ಜ.21- ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜನವರಿ 23 ಮತ್ತು 24 ರಂದು ಉತ್ತರ ಪ್ರದೇಶದಲ್ಲಿನ ತಮ್ಮ ಕ್ಷೇತ್ರಗಳಾದ ಕ್ರಮವಾಗಿ ರಾಯ್ ಬರೇಲಿ ಹಾಗೂ ಅಮೇಥಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ಎರಡು ದಿನಗಳ ಭೇಟಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥರು ಅನೇಕ ಕಾರ್ಯಕ್ರಮಗಳನ್ನು ಪಾಲ್ಗೊಳ್ಳಲಿದ್ದು, ಜಿಲ್ಲಾ ವೀಕ್ಷಕರು ಹಾಗೂ ಮೇಲ್ವಿಚಾರಣಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ರಾಯ್ ಬರೇಲಿಯಲ್ಲಿ ಜಿಲ್ಲಾ ವೀಕ್ಷಕರು ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೋನಿಯಾಗಾಂಧಿ ಕೂಡಾ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಜ.23ರಂದು ಫರ್ಸಾಂತ್ ಗಂಜ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸೋನಿಯಾ ಹಾಗೂ ರಾಹುಲ್ ಗಾಂಧಿ, ನಂತರ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಜನವರಿ 24 ರಂದು ಅವರು ದೆಹಲಿಗೆ ಹಿಂತಿರುಗಲಿದ್ದಾರೆ.

Facebook Comments

Sri Raghav

Admin