ಚುನಾವಣೆ ಸರ್ಕಾರಕ್ಕೆ ಸವಾಲಲ್ಲ, ನಮ್ಮ ಆಡಳಿತದ ಮೇಲೆ ಜನರಿಗೆ ವಿಶ್ವಾಸವಿದೆ : ರಾಜ್‍ನಾಥ್

ಈ ಸುದ್ದಿಯನ್ನು ಶೇರ್ ಮಾಡಿ

Rajnath-Singhಗ್ರೇಟರ್ ನೊಯ್ಡಾ, ಜ.21(ಪಿಟಿಐ)- ಮುಂಬರುವ ಲೋಕಸಭಾ ಚುನಾವಣೆ ಕೇಂದ್ರ ಸರ್ಕಾರಕ್ಕೆ ಸವಾಲು ಆಗಿಲ್ಲ ಎಂದು ಹೇಳಿರುವ ಗೃಹ ಸಚಿವ ರಾಜ್‍ನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಆಡಳಿತದ ಮೇಲೆ ಸಾಮಾನ್ಯ ಜನರು ಪರಿಪೂರ್ಣ ವಿಶ್ವಾಸ ಹೊಂದಿದ್ದಾರೆ. ಹೀಗಾಗಿ ನಮಗೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಎನ್‍ಡಿಎ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಯಾವುದೇ ಗಂಭೀರ ಭ್ರಷ್ಟಾಚಾರ ಆರೋಪಗಳಿಗೆ ಗುರಿಯಾಗಿಲ್ಲ ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಾಧನೆ ಮತ್ತು ಯಶಸ್ಸಿನ ಭಯದಿಂದ ವಿರೋಧ ಪಕ್ಷಗಳ ಒಗ್ಗೂಡಿ ಮಾಡಿಕೊಂಡಿರುವ ದುರ್ಬಲ ಮಹಾಮೈತ್ರಿಯಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದಕ್ಕೂ ಮುನ್ನ ಅವರು ಗ್ರೇಟರ್ ನೋಯ್ಡಾದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಶಿಬಿರದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಬೇಕು.

ಕೇವಲ ವಿದ್ಯೆಯನ್ನು ನೀಡಿದರಷ್ಟೇ ಸಾಲದು. ಅದರಲ್ಲಿ ನೈತಿಕ ಮೌಲ್ಯಗಳಿರುವಂಥ ಶಿಕ್ಷಣ ನೀಡಬೇಕು. ಜೀವನದ ಪ್ರತಿಯೊಂದು ಹಂತದಲ್ಲೂ ನೈತಿಕ ಮೌಲ್ಯಗಳು ಅತ್ಯಗತ್ಯ ಎಂದು ಸಲಹೆ ಮಾಡಿದರು.

Facebook Comments