ತುಮಕೂರಿನಾದ್ಯಂತ ಭಾರಿ ಬಂದೋಬಸ್ತ್ , 20 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

Tumakuru-Police

ಬೆಂಗಳೂರು,ಜ.21- ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವ ಹಿನ್ನೆಲೆಯಲ್ಲಿ ತುಮಕೂರಿನಾದ್ಯಂತ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಮಠದ ಆವರಣದೊಳಗೆ ಸಾರ್ವಜನಿಕರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ನಗರದಾದ್ಯಂತ 20 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕೇಂದ್ರ ವಲಯ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

ಇನ್ನು ಶ್ರೀಗಳ ಆರೋಗ್ಯದಲ್ಲಿ ಏರುಪೇರು ಅನ್ನೋ ಸುದ್ದಿ ತಿಳಿಯುತ್ತಿದ್ದಂತೆ ಮಠಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೇ ಮಠಕ್ಕೆ ಭದ್ರತೆ ಹೆಚ್ಚಿಸಿರೋದ್ರಿಂದ ಭಕ್ತರಲ್ಲಿ ಸಹಜವಾಗಿಯೇ ಆತಂಕ ಸೃಷ್ಟಿಯಾಗಿದೆ.

ತಮಕೂರು ಸೇರಿದಂತೆ ಇತರೆ ಜಿಲ್ಲೆಗಳಿಗೂ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ರಾಮನಗರ ಜಿಲ್ಲೆಗಳಲ್ಲಿಯೂ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ.

ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವುದರಿಂದ ತಾತ್ಕಾಲಿಕವಾಗಿ ಭಕ್ತರ ದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಮಠದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ತಾತ್ಕಾಲಿಕವಾಗಿ ಭಕ್ತರಿಗೆ ಶ್ರೀಗಳ ದರ್ಶನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಶ್ರೀಗಳನ್ನು ನೋಡಲು ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಈ ಬಗ್ಗೆ ವಿಷಯ ತಿಳಿದು ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಮತ್ತು ಮಕ್ಕಳು ಆಗಮಿಸುತ್ತಿದ್ದಾರೆ. ಆದ್ದರಿಂದ ಮುಂಜÁಗೃತ ಕ್ರಮವಾಗಿ ಸಿದ್ದಗಂಗಾ ಮಠಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅಂತೆಯೇ ಮಠದ ಮುಖ್ಯದ್ವಾರದಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದ್ದು, ಎಲ್‍ಇಡಿ ಪರದ ಸಹ ಅಳವಡಿಸಲಾಗಿದೆ.
ಭಕ್ತರು ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

Facebook Comments

Sri Raghav

Admin