ಲಂಡನ್‍ನಲ್ಲಿ ಕಾಂಗ್ರೆಸ್‍ನಿಂದ ಇವಿಎಂ ಹ್ಯಾಕ್ : ರವಿಶಂಕರ್ ಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

Ravi-Shankar-Prasadನವದೆಹಲಿ, ಜ.22- ಬಿಜೆಪಿ ಪ್ರಚಂಡ ಜಯ ದಾಖಲಿಸಿದ 2014ರ ಲೋಕಸಭಾ ಚುನಾವಣೆಯಲ್ಲಿನ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಈ ಸಂಬಂಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಕಾಂಗ್ರೆಸ್ ಲಂಡನ್‍ನಲ್ಲೇ ಇವಿಎಂಗಳ ಹ್ಯಾಕಥಾನ್ ಮಾಡಿದೆ ಎಂದು ಕೇಂದ್ರ ಕಾನೂನು ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ-ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಡನ್‍ನಲ್ಲಿ ನಡೆದ ಇವಿಎಂ ಹ್ಯಾಕ್‍ಅನ್ನು ಕಾಂಗ್ರೆಸ್ ಪ್ರಾಯೋಜಿಸಿದೆ. ಇದನ್ನು ಸದ್ಯದಲ್ಲೇ ನಾವು ಬಹಿರಂಗಗೊಳಿಸುತ್ತೇವೆ ಎಂದು ತಿಳಿಸಿದರು.

Facebook Comments