ಗಾಂಜಾ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಸೇರಿ ಮೂವರ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

arreste ಬೆಂಗಳೂರು, ಜ.22- ಮಾದಕ ವಸ್ತು ಗಾಂಜಾ ಬೀಜ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ 10 ಕೆಜಿ ಗಾಂಜಾ ಹಾಗೂ 480 ಗ್ರಾಂ ಗಾಂಜಾ ಬೀಜವನ್ನು ವಶಪಡಿಸಿಕೊಂಡಿದ್ದಾರೆ.

ಸೋಲದೇವನಹಳ್ಳಿ:  ಇಲ್ಲಿನ ಆಚಾರ್ಯ ಕಾಲೇಜು ರಸ್ತೆಯಲ್ಲಿ ವಿದೇಶಿ ಪ್ರಜೆಯೊಬ್ಬ ಸಾರ್ವಜನಿಕರಿಗೆ ಗಾಂಜಾ ಬೀಜ ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಮೇರೆಗೆ ಸೋಲದೇವನಹಳ್ಳಿ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸೂಡಾನ್ ದೇಶದ ಕರ್ತೂಮ್ ನಿವಾಸಿ ಅಹಮದ್ ಮೂಸ(26) ಬಂಧಿತ ವಿದೇಶಿ ಪ್ರಜೆ.

ನಗರದ ಸಿಡೇದೆಹಳ್ಳಿಯಲ್ಲಿ ನೆಲೆಸಿದ್ದ ಈತ ಗಾಂಜಾ ಬೀಜ ಮಾರಾಟ ಮಾಡುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದು, ಈತನಿಂದ 480 ಗ್ರಾಂ ತೂಕದ ಗಾಂಜಾ ಬೀಜ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಉಪ ವಿಭಾಗದ ಎಸಿಪಿ ರವಿ ಪ್ರಸಾದ್ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ವೆಂಕಟೇಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ನಂದಿನಿಲೇಔಟ್: ಮಾದಕ ವಸ್ತು ಗಾಂಜಾವನ್ನು ಎಫ್‍ಟಿಐ ಸರ್ಕಲ್‍ನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಿವಾಕರ್ (21) ಮತ್ತು ಶ್ರೀರಾಮ್ (19)ಬಂಧಿತ ಆರೋಪಿಗಳಾಗಿದ್ದು, ಇವರಿಂದ 10 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ತಮಿಳುನಾಡು ರಾಜ್ಯದ ಕಂಬಮ್ ಸಿಟಿಯಿಂದ ಅಜೀತ್ ಎಂಬಾತ ಗಾಂಜಾವನ್ನು ಖರೀದಿಸಿ ತಮ್ಮನ್ನು ಬೆಂಗಳೂರಿನಲ್ಲಿ ಮಾರಾಟ ಮಾಡಲು ಜೊತೆಯಲ್ಲಿ ಕರೆದುಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ.

ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಧನಂಜಯರವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಲೋಹಿತ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Facebook Comments