ಸಿವಿಲ್ ಕಾನ್ಸ್ಟೆಬಲ್ ಹುದ್ದೆಗಳಿಗೆ 27ರಂದು ಲಿಖಿತ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

exam

ಬೆಂಗಳೂರು, ಜ.22- ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ (ಪುರುಷ ಮತ್ತು ಮಹಿಳಾ ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.27ರಂದು ಬೆಳಗ್ಗೆ 10.30ರಿಂದ 12 ಗಂಟೆಯವರೆಗೆ ನಗರದ 64 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 41,220 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.

ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖೆ ವೆಬ್‍ಸೈಟ್ www.ksp.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕರೆ ಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಸದರಿ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಉದ್ಯೋಗ ಮಾಹಿತಿ : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಖಾಲಿ ಇರುವ 429 ಹುದ್ದೆಯ ನೇಮಕಾತಿಗಾಗಿ ಸಿಐಎಸ್ಎಫ್ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ.

ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.  21 ನೇ ಜನವರಿ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 20 ನೇ ಫೆಬ್ರವರಿ 2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೀನಿಯರ್ ಸೆಕೆಂಡರಿ ಸ್ಕೂಲ್ ಸರ್ಟಿಫಿಕೇಟ್ (10 + 2) ಶೈಕ್ಷಣಿಕ ಸಂಬಂಧಿತ ನೀಡಲಾದ ಪ್ರಮಾಣಪತ್ರ.

ಅಧಿಸೂಚನೆಯ ಕೊನೆಯ ದಿನಾಂಕದಂತೆ 18 ರಿಂದ 25 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿದಾರರಿಗೆ ಆಯ್ಕೆ ಪ್ರಕ್ರಿಯೆ ಆಯ್ಕೆ ಪರೀಕ್ಷೆ, ಭೌತಿಕ ದಕ್ಷತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.  ಹೆಚ್ಚಿನ ಮಾಹಿತಿಗಾಗಿ ಈ ಮುಂದಿನ ಲಿಂಕ್ ಗೆ ಭೇಟಿನೀಡಿ https://goo.gl/RXrfL3

Facebook Comments