ಸಿದ್ಧಗಂಗಾಶ್ರೀ ಕ್ರಿಯಾಸಮಾಧಿ ಕಾರ್ಯದಲ್ಲಿ ಗಣ್ಯಾತಿಗಣ್ಯರ ಭಾಗಿ

ಈ ಸುದ್ದಿಯನ್ನು ಶೇರ್ ಮಾಡಿ

Shivakumar--01

ತುಮಕೂರು, ಜ.15- ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿ ನೆರವೇರಿಸುವ ಕಾರ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಇಂದು ಮಧ್ಯಾಹ್ನ ಶ್ರೀಮಠಕ್ಕೆ ಆಗಮಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಶ್ರೀಗಳ ಲಿಂಗ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಗೋವಿಂದ ಎಂ.ಕಾರಜೋಳ, ಸಿ.ಟಿ.ರವಿ, ಸಂಸದರಾದ ಶಿವಕುಮಾರ್ ಉದಾಸಿ, ಬ್ರಹ್ಮಾನಂದ ಗುರೂಜಿ, ನರೇಂದ್ರಬಾಬು ಶರ್ಮ, ಹಿರಿಯ ಪತ್ರಕರ್ತ ಡಾ.ಪಾಟೀಲ ಪುಟ್ಟಪ್ಪ, ನಟ ಜಗ್ಗೇಶ್ ಸೇರಿದಂತೆ ಹಲವು ಗಣ್ಯರು ಶ್ರೀಗಳ ಲಿಂಗ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ವ್ಯಕ್ತಪಡಿಸಿದರು.

ನಿನ್ನೆ ಶ್ರೀಮಠಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಅಲ್ಲಿಯೇ ತುರ್ತುಸಭೆ ನಡೆಸಿ ಶ್ರೀಗಳ ಗೌರವಾರ್ಥ ಇಂದು ರಜೆ ಘೋಷಿಸಿ ನಾಳೆಯವರೆಗೂ ಶೋಕಾಚರಣೆಗೆ ತೀರ್ಮಾನ ಕೈಗೊಂಡಿದ್ದರು.

ಇಂದು ಸಂಜೆ ನಡೆಯುವ ಶ್ರೀಗಳ ಕ್ರಿಯಾಸಮಾಧಿ ಕಾರ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Facebook Comments