ಸಿದ್ದಗಂಗಾಶ್ರೀಗಳ ಕ್ರಿಯಾ ಸಮಾಧಿಗೆ ಪ್ರಧಾನಿ ಮೋದಿ ಹಾಜರಾಗಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Nirmala-Seetaraman--01
ಬೆಂಗಳೂರು, ಜ.22- ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಕ್ರಿಯಾ ಸಮಾಧಿಗೆ ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲಿದ್ದಾರೆ.

ಶ್ರೀಗಳ ಕ್ರಿಯಾಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ಬರಬೇಕೆಂಬುದು ಭಕ್ತರ ಒತ್ತಾಯವಾಗಿತ್ತು. ಆದರೆ, ದೇಶದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಪ್ರಧಾನಿ ಭೇಟಿಗೆ ಜಿಲ್ಲಾಡಳಿತ ಅವಕಾಶ ನೀಡಲು ನಿರಾಕರಿಸಿದೆ.

ಹೀಗಾಗಿ ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳುವ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇನ್ನು ಕೇಂದ್ರವನ್ನು ಪ್ರತಿನಿಧಿಸಿರುವ ರಾಜ್ಯ ಸಚಿವರಾದ ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ, ಅನಂತ್‍ಕುಮಾರ್ ಹೆಗಡೆ ಸೇರಿದಂತೆ ಮತ್ತಿತರರು ನಿನ್ನೆಯಿಂದಲೇ ಮಠದಲ್ಲಿ ಬೀಡುಬಿಟ್ಟಿದ್ದಾರೆ.

Facebook Comments

Sri Raghav

Admin