ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಶಾಂತಿಯುತವಾಗಿ ನಡೆಯಲು ಸಹಕರಿಸಿದ ಪೊಲೀಸರಿಗೆ ಸಿಎಂ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

CM-Kumaraswamy-Press-Meet

ತುಮಕೂರು, ಜ.23- ಸದ್ಯದಲ್ಲೇ ಔರಾದ್ಕರ್ ವರದಿಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ಧಗಂಗಾ ಶ್ರೀಗಳ ಲಿಂಗೈಕ್ಯದ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ನೀಡುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಸರ್ಕಾರಿ ಗೌರವ ಸಮರ್ಪಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಸಲ ವೇದಿಕೆಯಿಂದ ಶ್ರೀ ಶಿವಕುಮಾರ ಸ್ವಾಮೀಜಿಗಳನ್ನು ರುದ್ರಾಕ್ಷಿ ಮಂಟಪದಲ್ಲಿ ಕರೆತಂದು ಲಿಂಗೈಕ್ಯದವರೆಗೂ ಎಲ್ಲ ರೀತಿಯ ಸಿದ್ಧತೆ ಮಾಡಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಉತ್ತರ ಹಾಗೂ ದಕ್ಷಿಣ ಭಾಗದಿಂದ ಹರಿದು ಬಂದ ಜನಸಾಗರದೊಂದಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಎಡಿಜಿಪಿ ಕಮಲ್‍ಪಂಥ್ ಅವರ ನೇತೃತ್ವದಲ್ಲಿ ಎಸ್‍ಪಿ ಕೋಟಾವರ ಕೃಷ್ಣ, ಕೇಂದ್ರಿಯ ವಲಯ ಐಜಿಪಿ ದಯಾನಂದ್, 10ಕ್ಕೂ ಹೆಚ್ಚು ಎಸ್‍ಪಿಗಳು, 6 ರಿಂದ 7 ಸಾವಿರ ಸಿಬ್ಬಂದಿ ಎಲ್ಲರೂ ಸೂಕ್ತ ರೀತಿಯಲ್ಲಿ ಕರ್ತವ್ಯ ಕೈಗೊಂಡಿದ್ದಾರೆ.

ಅವರ ಕಾರ್ಯವೈಖರಿ ಶ್ಲಾಘನೀಯ ಎಂದರು.ಇನ್ನೆರಡು ದಿನಗಳ ಕಾಲ ಭಕ್ತರು ಲಿಂಗೈಕ್ಯ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೂಕ್ತ ವ್ಯವಸ್ತೆ ಹಾಗೂ ಭದ್ರತೆ ಒದಗಿಸಲು ಸೂಚಿಸಿರುವುದಾಗಿ ತಿಳಿಸಿದರು.

ಔರಾದ್ಕರ್ ಅವರ ವರದಿಯನ್ನು ಸಹ ಜಾರಿಗೊಳಿಸಲು ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದ ಅವರು ಇನ್ನೆರಡು ದಿನ ಭಕ್ತರು ಶಾಂತಿ-ಸಹನೆಯಿಂದ ಗದ್ದುಗೆ ದರ್ಶನ ಪಡೆಯುವಂತೆ ಕರೆ ನೀಡಿದರು.

Facebook Comments