ಶಿವಮೊಗ್ಗ ಜಿಲ್ಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಮಂಗನ ಕಾಯಿಲೆ

ಈ ಸುದ್ದಿಯನ್ನು ಶೇರ್ ಮಾಡಿ

monkeyಬೆಂಗಳೂರು, ಜ.23-ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದರೂ ರೋಗ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳದ ಕಾರಣ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ.ವೆಂಕಟೇಶ್ ಅವರನ್ನು ಅಮಾನತುಗೊಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಮಂಗನ ಕಾಯಿಲೆಯಿಂದ ಸಾವು-ನೋವು ಹೆಚ್ಚಾಗಿದೆ. ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದರೂ ಈ ಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಸಮಯೋಚಿತವಾಗಿ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿದ ಹಿನಲೆಯಲ್ಲಿ ಡಾ.ಬಿ.ಸಿ.ವೆಂಕಟೇಶ್ ಅವರನ್ನು ಕರ್ತವ್ಯ ಲೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್‍ಕುಮಾರ್ ಪಾಂಡೆ ಅವರು ಅಮಾನತುಪಡಿಸಿ ಆದೇಶಿಸಿದ್ದಾರೆ.

Facebook Comments