ಹಗಲು-ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

crimiಬೆಂಗಳೂರು, ಜ.22- ಹಗಲು ಮತ್ತು ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೊ ಬ್ಬನನ್ನು ಉತ್ತರ ವಿಭಾಗದ ನಂದಿನಿಲೇಔಟ್ ಠಾಣೆ ಪೊಲೀಸರು ಬಂಧಿಸಿ 1.50 ಲಕ್ಷ ರೂ. ಬೆಲೆ ಬಾಳುವ 42 ಗ್ರಾಂ ಚಿನ್ನಾಭರಣ ಹಾಗೂ ಬೈಕ್‍ವೊಂದನ್ನು ವಶಪಡಿಸಿಕೊಂಡಿದ್ದಾರೆ.ನಂದಿನಿಲೇಔಟ್ ನಿವಾಸಿ ಅಲ್ತಾಫ್ ಸಯ್ಯದ್ ಅಬ್ದುಲ್ಲಾ (30) ಬಂಧಿತ ಆರೋಪಿ.

ಜ.15ರಂದು ಮಧ್ಯಾಹ್ನ ಇಲ್ಲಿನ ನಿವಾಸಿ ಜಯಮ್ಮ ಎಂಬುವರು ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಮನೆಗೆ ಹೋಗಿ ಸಂಜೆ ವಾಪಸ್ ಬರುವಷ್ಟರಲ್ಲಿ ಮನೆಯ ಬಾಗಿಲು ಬೀಗ ಮುರಿದು ಬೀರುವಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಮನೆಗಳ್ಳನನ್ನು ಬಂಧಿಸಿ 1.50 ಲಕ್ಷ ರೂ. ಬೆಲೆಯ 42 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಂಧನದಿಂದ ನಂದಿನಿಲೇಔಟ್ ಠಾಣೆಯ 5 ಹಗಲು ಮತ್ತು ರಾತ್ರಿ ಕನ್ನಕಳವು ಪ್ರಕರಣ ಬೆಳಕಿಗೆ ಬಂದಿದೆ.

Facebook Comments