ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿ ಬಟಾಬಯಲಾಗಿದೆ : ಕೋಟಾ ಶ್ರೀನಿವಾಸ್

ಈ ಸುದ್ದಿಯನ್ನು ಶೇರ್ ಮಾಡಿ

kota srinivas

ಬೆಂಗಳೂರು,ಜ.23-ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಶಾಸಕರ ನಡುವೆ ಮಾರಾಮಾರಿ ನಡೆಸಿ ಕಾಂಗ್ರೆಸ್ ಸಂಸ್ಕøತಿಯನ್ನು ಅನಾವರಣ ಮಾಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಮ್ಮ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಸಿದ್ದವಾಗಿದೆ ಎಂದು ನಾವು ಭಾವಿಸಿದ್ದೆವು. ಶಾಸಕರಾದ ಆನಂದ್ ಸಿಂಗ್ ಮತ್ತು ಗಣೇಶ್ ಮಾರಾಮಾರಿ ನಡೆಸಿ ಕಾಂಗ್ರೆಸ್‍ನಲ್ಲಿ ಈಗಲೂ ಗೂಂಡಾ ಸಂಸ್ಕøತಿ ಇದೆ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಆರೋಪಿಸಿದರು.

ಬರಗಾಲ, ಕುಡಿಯುವ ನೀರು, ದುಡಿಯುವ ಕೈಗಳಿಗೆ ಕೆಲಸ ನೀಡಲಾಗದೆ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲು ಸಂಪೂರ್ಣವಾಗಿ ವಿಫಲವಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವರು ಒಂದೇ ಒಂದು ಬರಪೀಡಿತ ತಾಲ್ಲೂಕಿಗೆ ಭೇಟಿ ಕೊಟ್ಟಿಲ್ಲ.

ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರೂ ಸರ್ಕಾರ ಟೇಕಾಫ್ ಆಗಿಲ್ಲ ಎಂಬುದಕ್ಕೆ ಇದಕ್ಕಿಂತ ಪುರಾವೆ ಮತ್ತೇನು ಬೇಕು ಎಂದು ಪ್ರಶ್ನಿಸಿದರು. ಶಾಸಕರಾದವರೇ ರೆಸಾರ್ಟ್‍ನಲ್ಲಿ ಬಡಿದಾಡಿಕೊಂಡು ಆಸ್ಪತ್ರೆಗೆ ಸೇರುತ್ತಾರೆ. ಶಾಸಕರಿಗೆ ಇಲ್ಲದ ರಕ್ಷಣೆ ಇನ್ನು ಜನ ಸಾಮಾನ್ಯರಿಗೆ ಎಲ್ಲಿಂದ ಸಿಗುತ್ತದೆ.

ಇಡೀ ಪ್ರಕರಣವನ್ನು ಕಾಂಗ್ರೆಸ್ ಮುಚ್ಚಿ ಹಾಕಲು ಮುಂದಾಗಿತ್ತು ಎಂಬುದಕ್ಕೆ ಆ ನಾಯಕರು ನೀಡಿದ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದರು. ಬಿಜೆಪಿ ಶಾಸಕರು ರೆಸಾರ್ಟ್‍ನಲ್ಲಿ ಉಳಿದುಕೊಂಡರೆ ನಮ್ಮ ಬಗ್ಗೆ ಟೀಕೆ ಮಾಡುತ್ತಾರೆ. ಆಡಳಿತ ಪಕ್ಷದ ಭಾಗವಾಗಿ ನೀವೇ ರೆಸಾರ್ಟ್‍ನಲ್ಲಿ ಉಳಿದುಕೊಂಡರೆ ರಾಜ್ಯದ ಪರಿಸ್ಥಿತಿ ಏನಾಗಬಾರದು.

ಸರ್ಕಾರ ಅಸ್ತಿತ್ವದಲ್ಲಿಯೇ ಎಂಬ ಅನುಮಾನ ಜನರಿಗೆ ಕಾಡುತ್ತದೆ. ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದ್ದು ಅಧಿಕಾರಿಗಳು ಕೂಡ ನಿರ್ಲಕ್ಷ್ಯ ಭಾವನೆಗೆ ಬಂದಿದ್ದಾರೆ.

ಪ್ರತಿಪಕ್ಷವಾಗಿ ಬಿಜೆಪಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಬರ ಅಧ್ಯಯನ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಪ್ರಚಲಿತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು.

Facebook Comments

Sri Raghav

Admin