ದ್ವಿಚಕ್ರ ವಾಹನ ಕಳ್ಳರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

MYSOER-POLICEಮೈಸೂರು, ಜ.22- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ನಗರದ ಮೇಟಗಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೋಳ ನಿವಾಸಿ ಜಾನ್‍ಪೀಟರ್ (19) ಹಾಗೂ ಕಿಶೋರ್ (19) ಬಂಧಿತ ಆರೋಪಿಗಳು.

ದ್ವಿಚಕ್ರ ವಾಹನ ಕಳ್ಳತನವಾಗುತ್ತಿರುವುದರ ಬಗ್ಗೆ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಜ.20ರಂದು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1.2ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಮೇಟಗಳ್ಳಿ, ದೇವರಾಜ ಮತ್ತು ವಿಜಯಗರ ಠಾಣಾ ವ್ಯಾಪ್ತಿಗಳಲ್ಲಿ ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದುದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.

ಮೇಟಗಳ್ಳಿ ಠಾಣೆ ಇನ್ಸ್‍ಪೆಕ್ಟರ್ ರಾಘವೇಂದ್ರಗೌಡ, ಎಸ್‍ಐ ವಿಶ್ವನಾಥ್, ಎಎಸ್‍ಐ ಪೊನ್ನಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಯಲ್ಲಿದ್ದರು.

Facebook Comments