ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‍ಕೌಂಟರ್, 3 ಉಗ್ರರು ಖತಂ

ಈ ಸುದ್ದಿಯನ್ನು ಶೇರ್ ಮಾಡಿ

Encounte

ಶ್ರೀನಗರ, ಜ.24- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಒಂದೆಡೆ ಉಗ್ರರ ಅಟ್ಟಹಾಸ ಮುಂದುವರೆದಿದ್ದರೆ ಮತ್ತೊಂದೆಡೆ ಅವರ ದಮನ ಕಾರ್ಯಾಚರಣೆ ತೀವ್ರ ಗೊಂಡಿದೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಉಗ್ರರು ಅಡಗಿರುವ ಮಾಹಿತಿ ತಿಳಿದು ಬಾರಾಮುಲ್ಲಾ ಜಿಲ್ಲೆಯಬಿನ್ನರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಶೋಧ ಕಾರ್ಯಚರಣೆ ವೇಳೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ನಂತರ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿವೆ. ಕಾರ್ಯಾಚರಣೆ ವೇಳೆಯಲ್ಲಿ ಮೂವರು ಉಗ್ರರು ಹತರಾಗಿರುವುದಾಗಿ ಅವರು ತಿಳಿಸಿದ್ದಾರೆ.

ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಇನ್ನಿತರ ಅಪರಾಧ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments

Sri Raghav

Admin