ಉಡುಪಿಯ ಕೋಟಾದಲ್ಲಿ ಡಬಲ್ ಮರ್ಡರ್..!

ಈ ಸುದ್ದಿಯನ್ನು ಶೇರ್ ಮಾಡಿ

Udupi-Murder--01

ಮಂಗಳೂರು, ಜ.27- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕರಿಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಡುಪಿಯ ಕೋಟಾದಲ್ಲಿ ನಡೆದಿದೆ.

ತಡರಾತ್ರಿ ಉಡುಪಿಯ ಕೋಟಾದ ಸರ್ವೀಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭರತ್ ಮತ್ತು ಯತೀಶ್ ಎಂಬುವವರನ್ನು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ.

ಏಕಾಏಕಿ ಜಗಳ ತೆಗೆದು ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ. ತಕ್ಷಣ ಯತೀಶ್ ಮತ್ತು ಭರತ್ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗದೆ ಅಟ್ಟಾಡಿಸಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ದುಷ್ಕರ್ಮಿಗಳು ತಕ್ಷಣ ಅಲ್ಲಿಂದ ಪರಾರಿಯಾಗಿದ್ದು, ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಪರಿಚಿತರೇ ಈ ಕೃತ್ಯ ನಡೆಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.  ಭೂ ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಹೇಳಲಾಗುತ್ತಿದ್ದರೂ ರಾಜಕೀಯ ವೈಷಮ್ಯ ಕೂಡ ಸೇರಿದೆ ಎಂಬ ಅನುಮಾನ ವ್ಯಕ್ತವಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin