BREAKING : ಮೋಸ್ಟ್ ವಾಂಟೆಡ್ ​ಭೂಗತ ಪಾತಕಿ ರವಿ ಪೂಜಾರಿ ಕೊನೆಗೂ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

Ravim-Poojari

ಬೆಂಗಳೂರು. ಜ. 31 : ಮೋಸ್ಟ ವಾಂಟೆಡ್ ಭೂಗತ ಪಾತಕಿ ರವಿ ಪೂಜಾರಿ ಕೊನೆಗೂ ಸೆರೆಸಿಕ್ಕಿದಾನೆ.  ರವಿ ಪೂಜಾರಿನ್ನು ದಸಖೀಅನ್ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.

ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾರುವ ರವಿ ಪೂಜಾರಿ ಪೊಲೀಸರ ಮೋಸ್ಟ ವಾಂಟೆಂಡ್ ಭೂಗತ ಪಾತಕಿಯಾಗಿದ್ದಾನೆ.

ಈತ ರಿಮೋಟ್ ರೌಡಿಸಂ ನಡೆಸಿದ ಮೊದಲ ಭೂಗತ ಪಾತಕಿ ಎಂಬ ಕುಖ್ಯಾತಿಯೂ ರವಿ ಪೂಜಾರಿಗಿದೆ.  60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿವೆ.

ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು ಎಂದು ತಿಳಿದುಬಂದಿದ್ದು, ಈ ಹಿನ್ನಲೆಯಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ವಶಕ್ಕೆ ಪಡೆದಿರಬಹುದು ಎಂದು ಹೇಳಲಾಗುತ್ತಿದೆ.

ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ವಶಕ್ಕೆ ಪಡೆದಿರುವುದು ಖಚಿತವಾಗಿದ್ದು, ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Facebook Comments

Sri Raghav

Admin