ಕಾರಿಗೆ ಲಾರಿ ಡಿಕ್ಕಿ, ಪ್ರಾಣಾಪಾಯದಿಂದ ಪಾರಾದ ಪಂಡಿತಾರಾಧ್ಯಶ್ರೀಗಳು..!
ಚಿತ್ರದುರ್ಗ, ಫೆ.2-ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಾಸಲು ಗ್ರಾಮದಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ. ಶ್ರೀಗಳ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಸ್ವಾಮೀಜಿ ಅವರು ಶನಿವಾರ ಬೆಳಿಗ್ಗೆ ಸಾಣೇಹಳ್ಳಿಯಿಂದ ಭದ್ರಾವತಿ ಕಡೆ ಕಾರಿನಲ್ಲಿ ಸಾಗುತ್ತಿದ್ದರು.
ಸಾಸಲು ರೈಲ್ವೆ ಮೇಲ್ಸೇತುವೆ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಚಿಕ್ಕಜಾಜೂರು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತ ಭೀಕರವಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಸ್ವಾಮೀಜಿ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಚಿಕ್ಕಜಾಜೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.
Facebook Comments