ಪ್ಯಾರಿಸ್ : ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ, 9 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Parisಪ್ಯಾರಿಸ್, ಫೆ.5 (ಪಿಟಿಐ)- ಫ್ರಾನ್ಸ್ ರಾಜಧಾನಿ ಪ್ಯಾರಿಸ್‍ನ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂಭತ್ತು ಮಂದಿ ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ.

ಎಂಟು ಮಹಡಿಗಳ ಈ ಕಟ್ಟಡ 7 ಮತ್ತು 8ನೇ ಅಂತಸ್ತುಗಳಲ್ಲಿ ಬೆಂಕಿಯ ಕೆನ್ನಾಲಿಗೆ ಒಂಭತ್ತು ಮಂದಿಯನ್ನು ಆಪೋಶನ ತೆಗೆದುಕೊಂಡಿದೆ. ಮೂವರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಇತರ 27 ಮಂದಿ ಗಾಯಗೊಂಡಿದ್ದಾರೆ.

ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ. ಕಟ್ಟಡಗಳಲ್ಲಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅನೇಕರು ಮೇಲ್ಭಾಗದ ತಾರಸಿಗೆ ಬಂದು ಅತಂತ್ರ ಸ್ಥಿತಿಯಲ್ಲಿದ್ದರು.

ಅವರನ್ನು ರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳನ್ನು ಪ್ಯಾರಿಸ್‍ನ ಆಸ್ಪತ್ರೆಗಳಿಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Facebook Comments