ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

susideವಿಜಯಪುರ,ಫೆ.8-ಸರ್ಕಾರಿ ಕಾಲೇಜು ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಅತಾಲಟ್ಟಿ ಗ್ರಾಮದ ನಿವಾಸಿ ಪರಸಪ್ಪ ಸೊನ್ನದ(30) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತಿಕೋಟಾ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನ ಕಿಟಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪರಸಪ್ಪನ ಶವ ಪತ್ತೆಯಾಗಿದೆ.

ಇದನ್ನು ಕಂಡ ಕಾಲೇಜಿನ ಸೆಕ್ಯೂರಿಟಿ ಗಾರ್ಡ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಕಾಲೇಜಿನ ಕಿಟಿಕಿಗೆ ಪ್ಯಾಂಟನಿಂದ ನೇಣು ಬಿಗಿದು ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments