ಇಬ್ಬರ ಬಂಧನ, ಎರಡು ಆನೆ ದಂತಗಳ ವಶ

ಈ ಸುದ್ದಿಯನ್ನು ಶೇರ್ ಮಾಡಿ

elephantಬೆಂಗಳೂರು, ಫೆ.8-ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ ಎರಡು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಮೂಲದ ಮುರುಗಾನಂದಂ (35) ಮತ್ತು ಬಾಲು (60) ಬಂಧಿತ ಆರೋಪಿಗಳು.

ಎಚ್‍ಎಸ್‍ಆರ್ ಲೇಔಟ್‍ನ 3ನೇ ಬ್ಲಾಕ್, ಸರ್ವೀಸ್ ರಸ್ತೆಯಲ್ಲಿರುವ ವಾಟರ್ ಟ್ಯಾಂಕ್ ಸಮೀಪ ಇಬ್ಬರು ವ್ಯಕ್ತಿಗಳು ಆನೆ ದಂತಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಮಾಹಿ ಬಾಣಸವಾಡಿ ಉಪವಿಭಾಗದ ಎಸಿಪಿ ಅವರ ತಂಡಕ್ಕೆ ಲಭಿಸಿದೆ.

ತಕ್ಷಣ ಸ್ಥಳಕ್ಕೆ ತೆರಳಿದ ಬಾಣಸವಾಡಿ ಠಾಣೆ ಪೊಲೀಸರು ಆನೆದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿ ಎರಡು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ.

Facebook Comments