ಬಿಎಂಟಿಸಿ ಬಸ್-ಬೈಕ್ ನಡುವೆ ಡಿಕ್ಕಿ , ಮೂವರ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

BMTC-Bus-01

ಬೆಂಗಳೂರು, ಫೆ.11- ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು ದೇವಿಗೇರಿ ಬಳಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟವರು ಯಾರೆಂಬುವುದು ತಿಳಿದು ಬಂದಿಲ್ಲ. ಡಿಕ್ಕಿಯಾದ ರಭಸಕ್ಕೆ ಬಸ್ ಮತ್ತು ಬೈಕ್‍ಗೆ ಬೆಂಕಿ ತಗುಲಿದ್ದು , ಸಂಪೂರ್ಣ ಸುಟ್ಟು ಹೋಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin