ಪ್ರಧಾನಿ ಮೋದಿ ಆಂಧ್ರದ ಹಣ ಕದ್ದು ಅಂಬಾನಿಗೆ ಕೊಟ್ಟಿದ್ದಾರೆ : ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

Modi-vs-Rahul--0141

ನವದೆಹಲಿ, ಫೆ.11-ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಂಧ್ರ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಾರ್ಟಿ(ಟಿಡಿಪಿ) ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಪ್ರಧಾನಿ ಅವರು ಆಂಧ್ರಪ್ರದೇಶದ ಜನ ರ ಹಣವನ್ನು ಕದ್ದು ಅದನ್ನು ಉದ್ಯಮಿ ಅನಿಲ್ ಅಂಬಾನಿಗೆ ಕೊಟ್ಟಿದ್ದಾರೆ ಎಂದು ರಾಹುಲ್ ಆರೋಪಿಸಿದರು. ದೆಹಲಿಯ ಆಂಧ್ರಭವನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಚಂದ್ರಬಾಬು ನಾಯ್ಡು ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿ ಎಲ್ಲೇ ಹೋಗಲಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ.

ಅಗತ್ಯಕ್ಕಿಂತ ಹೆಚ್ಚು ಹಣಕಾಸು ನೆರವು ನೀಡಲಾಗಿದೆ ಎಂದು ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದರು.  ನಾನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸುವುದೇನೆಂದರೆ ಎಲ್ಲರೂ ಒಗ್ಗೂಡಿದ್ದೇವೆ.   ನಾವೆಲ್ಲರೂ ಖಂಡಿತಾ ಬಿಜೆಪಿಯನ್ನು ಸೋಲಿಸಿ ಮೋದಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ರಾಹುಲ್ ಹೇಳಿದರು.

ಅಂಬಾನಿಗಾಗಿ ಬಾಗಿಲು ತೆಗೆದ ಮೋದಿ : ಭಾರತೀಯ ವಾಯು ಪಡೆಯಿಂದ 30,000 ಕೋಟಿ ರೂ.ಗಳನ್ನು ಕಳವು ಮಾಡಲು ಉದ್ಯಮಿ ಅನಿಲ್ ಅಂಬಾನಿಗೆ ಮೋದಿ ಬಾಗಿಲು ತೆರೆದಿದ್ದಾರೆ ಎಂದು ರಾಹುಲ್ ಟ್ವಿಟರ್‍ನಲ್ಲೂ ಸಹ ವಾಗ್ದಾಳಿ ನಡೆಸಿದ್ದಾರೆ

Facebook Comments

Sri Raghav

Admin