ಬೆಂಗಳೂರಲ್ಲಿ 2 ಕಡೆ ಬೆಂಕಿ ಅವಘಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.12-ನಗರದ ಎರಡು ಕಡೆ ಅಗ್ನಿ ಅವಘಡ ಸಂಭವಿಸಿ ಅಪಾರ ನಷ್ಟವುಂಟಾಗಿರುವ ಘಟನೆ ನಡೆದಿದೆ.

ಕಮರ್ಷಿಯಲ್ ಸ್ಟ್ರೀಟ್:
ಇಲ್ಲಿನ ಇಬ್ರಾಹಿಂ ಸ್ಟ್ರೀಟ್, ಡೈಮಂಡ್ ಪ್ಲಾಜಾ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಮಧ್ಯರಾತ್ರಿ 12ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸುದ್ದಿ ತಿಳಿದ ಅಗ್ನಿಶಾಮಕ ದಳದವರು ಎರಡು ವಾಹನಗಳೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಾಮಾಕ್ಷಿ ಪಾಳ್ಯ:
ಇಲ್ಲಿನ ಕಾವೇರಿಪುರದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಎಂಜನಿಯರಿಂಗ್ ವಕ್ರ್ಸ್‍ನಲ್ಲಿ ರಾತ್ರಿ 11.30ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ತಕ್ಷಣ ಅಗ್ನಿಶಾಮಕ ಸಿಬ್ಬಂದಿ 2ವಾಹನಗಳೊಂದಿಗೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಎರಡೂ ಪ್ರಕರಣಗಳನ್ನು ಆಯಾ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದಾರೆ.

Facebook Comments