ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ : ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.12- ವಿವಾದಿತ ಧ್ವನಿಸುರುಳಿ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ತನಿಖಾ ದಳ ಮುಖ್ಯಮಂತ್ರಿ ಅಧೀನದಲ್ಲಿ ಬರುವುದರಿಂದ ನ್ಯಾಯ ಸಿಗುವುದಿಲ್ಲ. ಹೀಗಾಗಿ ನಾವು ಎಸ್‍ಐಟಿ ತನಿಖೆ ವಿರೋಧಿಸಿ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹೋರಾಟವನ್ನು ಮುಂದುವರೆಸುತ್ತೇವೆ. ನ್ಯಾಯಾಂಗ ತನಿಖೆಗೆ ವಹಿಸಿದರೆ ಸತ್ಯಾಂಶ ಹೊರ ಬರಲಿದೆ. ತಪ್ಪಿತಸ್ಥರಿಗೆ ಕಾನೂನು ರೀತಿ ಕ್ರಮ ಜರುಗಿಸಲು ನಮ್ಮದೇನು ಅಭ್ಯಂತರವಿಲ್ಲ ಎಂದು ಹೇಳಿದರು.

Facebook Comments