ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಕೋಲ್ಸೆ ಪಾಟೀಲ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.15- ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯ ದರ್ಶಿಯನ್ನಾಗಿ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಕೋಲ್ಸೆ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಅವರನ್ನು ನೇಮಕ ಮಾಡಿರುವುದಾಗಿ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಜೆಡಿಎಸ್ ಬಲವರ್ಧನೆಯಲ್ಲಿ ತೊಡಗಿಕೊಳ್ಳಬೇಕೆಂದು ತಿಳಿಸಿದ್ದಾರೆ.

Facebook Comments