ಹುತಾತ್ಮ ಯೋಧರಿಗೆ ಗಣ್ಯರ ಅಂತಿಮ ನಮನ, ಭಾವುಕರಾಗಿ ಪ್ರದಕ್ಷಣೆ ಹಾಕಿದ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ. ಫೆ. 15 : ಜಯಮ್ಮು ಮತ್ತು ಕಾಶ್ಮೀರದ ಆವಂತಿಪೋರಾದಲ್ಲಿ ಉಗ್ರರ ಪೈಶಾಚಿಕ ಕೃತ್ಯದಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ವೀರ ಯೋಧರ ಪಾರ್ಥೀವ ಶರೀರಗಳನ್ನು ಶುಕ್ರವಾರ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ತರಲಾಗಿದ್ದು,ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಭಾವುಕರಾಗಿದ್ದ ಪ್ರಧಾನಿ ಮೋದಿ ಯೋಧರಿಗೆ ಶಿರಬಾಗಿ ನಮಿಸಿ , ಪ್ರದಕ್ಷಿಣೆ ಹಾಕಿ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ನೀರವ ಮೌನ ಆವರಿಸಿತ್ತು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಹುತಾತ್ಮ ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ಮುಖ್ಯಸ್ಥರೂ ಕೂಡ ಹುತಾತ್ಮ ಯೋಧರ ಅಂತಿಮ ದರ್ಶನ ಪಡೆದರು.

ಪುಲ್ವಾಮದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ಎಚ್.ಗುರು (33) ಹುತಾತ್ಮರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ತಡರಾತ್ರಿ ಕರ್ನಾಟಕಕ್ಕೆ ಕಳುಹಿಸಲಾಗುತ್ತದೆ.

ನಾಳೆ ಬೆಳಗ್ಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದಾಳಿ ಕುರಿತಾಗಿ ಮಹತ್ವದ ಸರ್ವ ಪಕ್ಷ ಸಭೆ ನಡೆಯಲಿದೆ. ಈಗಾಗಲೇ ವೀರ ಯೋಧ ಗುರು  ಅಂತ್ಯಕ್ರಿಯೆಗೆ ಸಿದ್ಧತೆಗಳನ್ನು ನಡೆಸಲಾಗಿದೆ.

Facebook Comments

Sri Raghav

Admin