ಯೋಧರ ಪಾರ್ಥಿವ ಶರೀರವಿದ್ದ ಪೆಟ್ಟಿಗೆಗೆ ಹೆಗಲು ನೀಡಿದ ಗೃಹಸಚಿವ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಫೆ. 15 : ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಿನ್ನೆ ನಡೆದ ಭೀಕರ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರವಿದ್ದ ಪೆಟ್ಟಿಗೆಗೆ ಹೆಗಲು ಕೊಡುವ ಮೂಲಕ ಹುತಾತ್ಮ ಯೋಧರ ಕುಟುಂಬದವರ ಜೊತೆ ನಾವಿದ್ದೇವೆ ಎಂಬ ಸಂದೇಶವನ್ನು ಗೃಹಸಚಿವ ರಾಜನಾಥ್ ಸಿಂಗ್ ರವಾನಿಸಿದ್ದಾರೆ.

ಭಯೋತ್ಪಾದನಾ ದಾಳಿ ನಡೆದ ಪುಲ್ವಾಮಾ ಜಿಲ್ಲೆಗೆ ಶುಕ್ರವಾರ ಮಧ್ಯಾಹ್ನ ಭೇಟಿ ನೀಡಿದ ಗೃಹಸಚಿವ ರಾಜನಾಥ್ ಸಿಂಗ್ ಸೇನೆಯ ಉತ್ತರ ಕಮಾಂಡರ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಹುತಾತ್ಮರಿಗೆ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ಉಗ್ರರ ದಾಳಿಯಲ್ಲಿ ಛಿದ್ರಗೊಂಡಿದ್ದ ಸಿಆರ್‌ಪಿಎಫ್ ಯೋಧರೊಬ್ಬರ ದೇಹದ ತುಣುಕುಗಳನ್ನು ಇರಿಸಿದ ಪಾರ್ಥಿವ ಶರೀರದ ಪೆಟ್ಟಿಗೆಗೆ ಹೆಗಲು ಕೊಟ್ಟು ಸ್ವಲ್ಪ ದೂರ ನಡೆದರು.

ದೇಶಾದ್ಯಂತ ಉಗ್ರರ ಈ ಹೇಡಿ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು. ಪಾಕ್ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಬೇಕೆಂದು ಪ್ರತಿಭಟನೆಗಳು ನಡೆಯುತ್ತಿವೆ. ವೀರ ಪುತ್ರರನ್ನು ಕಳೆದುಕೊಂಡ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.

Facebook Comments

Sri Raghav

Admin