ಫೆ.19ರಂದು ಕರ್ನಾಟಕ ಬಂದ್‍…!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.16-ಜಮ್ಮುವಿನ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಪೈಶಾಚಿಕ ಕೃತ್ಯ ಖಂಡಿಸಿ ಉಗ್ರರ ಮೇಲೆ ಪ್ರತೀಕಾರಕ್ಕೆ ಆಗ್ರಹಿಸಿ ಇದೇ 19ರಂದು ಕನ್ನಡ ಒಕ್ಕೂಟದ ವತಿಯಿಂದ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಈ ಕುರಿತು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, 49ಯೋಧರನ್ನು ಬಲಿಪಡೆದ ಉಗ್ರರ ಪೈಶಾಚಿಕ ಕೃತ್ಯ ಖಂಡನೀಯ ಇಡೀ ದೇಶವೇ ಕಣ್ಣೀರಿನಲ್ಲಿ ಕೈ ತೊಳೆಯುತಿದೆ.

ನಾವೆಲ್ಲ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ನೀರು, ನೆಲ, ಜಲ, ಸಂಸ್ಕøತಿ ವಿಷಯದಲ್ಲಿ ಕನ್ನಡ ಪರ ಸಂಘಟನೆಗಳು ಒಗ್ಗಟ್ಟಿನ ಹೋರಾಟ ಮಾಡಿವೆ ನಮ್ಮನ್ನು ರಕ್ಷಣೆ ಮಾಡುವ ಯೋಧರು ಹುತಾತ್ಮರಾದಾಗ ನಾವೆಲ್ಲ ಅವರ ಪರ ನಿಲ್ಲಬೇಕಾಗಿದೆ ಎಂದರು.

ಹಾಗಾಗಿ ಫೆ. 19ರಂದು ಸಾವಿರಾರು ಕನ್ನಡಪರ ಸಂಘಟನೆಗಳೊಂದಿಗೆ ಕರ್ನಾಟಕ ಬಂದ್‍ಗೆ ಕರೆ ಕೊಡಲಾಗಿದೆ. ಅಂದು ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ಚಟುವಟಿಕೆಗಳನ್ನು ಸ್ತಬ್ಧಗೊಳಿಸಿ ಇಡೀ ನಾಡು ಈ ದುಷ್ಕøತ್ಯವನ್ನು ಖಂಡಿಸಲಿದೆ.

ಮತ್ತು ಪಾಪಿ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ನಾಡಿನ ಜನರೆಲ್ಲರೂ ಆಗ್ರಹಿಸಲಿದ್ದಾರೆ ಎಂದು ಅವರು ಹೇಳಿದರು. ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ, ಪ್ರತೀಕಾರ ತೀರಿಸಿಕೊಳ್ಳುತ್ತೇವೆ.

ಇದಕ್ಕಾಗಿ ಸೇನೆಗೆ ಸರ್ವಾಧಿಕಾರ ನೀಡಿದ್ದೇವೆ ಎಂದು ಪ್ರಧಾನಿ ಮೋದಿಯವರ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ ಎಂದು ವಾಟಾಳ ಹೇಳಿದರು. 40ಕ್ಕೂ ಹೆಚ್ಚು ರಾಷ್ಟ್ರಗಳು ಈ ನೀಚಕೃತ್ಯವನ್ನು ಖಂಡಿಸಿವೆ ಆದರೆ ನಮ್ಮ ನೆರೆರಾಷ್ಟ್ರ ಚೀನಾ ಸೌಮ್ಯವಾಗಿದೆ.

ಪ್ರಪಂಚದಾದ್ಯಂತ ಎಲ್ಲ ರಾಷ್ಟ್ರಗಳು ಈ ಘಟನೆಯನ್ನು ಖಂಡಿಸಬೇಕು. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿದರು. ಡಾ. ರಾಜಕುಮಾರ್ ಸಂಘದ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾರಾ ಗೋವಿಂದು ಮಾತನಾಡಿ ಉಗ್ರರ ಈ ಘಟನೆ ಖಂಡನೀಯ ಇದರ ವಿರುದ್ಧ ಹೋರಾಡಬೇಕು.

ಜನರಲ್ಲಿ ಜಾಗೃತಿ ಮೂಡಿಸಬೇಕು ಅದಕ್ಕಾಗಿ ಬಂದ್‍ಗೆ ಕರೆ ನೀಡಿದ್ದೇವೆ ಇದನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೆಗೌಡ ಮಾತನಾಡಿ, ಬಂದ್‍ಗೆ ಚಿತ್ರರಂಗವೂ ಕೂಡ ಬೆಂಬಲ ನೀಡಲಿದೆ.

ದೇಶಾದ್ಯಂತ ಸೂತಕದ ಛಾಯೆ ಆವರಿಸಿದೆ. ಈ ದುಷ್ಕøತ್ಯ ಖಂಡನೀಯವಾಗಿದ್ದು ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ. ದೇಶ ಪ್ರತೀಕಾರ ಕೇಳುತ್ತಿದ್ದೆ ಉಗ್ರರರನ್ನು ಮಟ್ಟ ಹಾಕಬೇಕಾಗಿದೆ ಎಂದು ಹೇಳಿದರು.

ಇದಕ್ಕಾಗಿ ದುಷ್ಟರ ವಿರುದ್ಧ ಕೈಗೊಂಡಿರುವ ಕರ್ನಾಟಕ ಬಂದ್‍ಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು. ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಜಾಗೃತಿ ವೇದಿಕೆ ಮಂಜುನಾಥ್ ದೇವು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ, ಕನ್ನಡ ಪರ ಸಂಘಟನೆಗಳ ಮುಖಂಡರಾದ ವಾ.ಚ.ಚನ್ನೇಗೌಡ, ಸಿ.ಪಿ.ನಾಗರಾಜ್, ಮುಬಾರಕ್ ಪಾಷಾ ಸೇರಿದಂತೆ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

Facebook Comments

Sri Raghav

Admin