ಪುಲ್ವಾಮಾ ಉಗ್ರರ ದಾಳಿಗೆ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಕಾರಣ : ಜಮೀರ್

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ, ಫೆ.16-ಜಮ್ಮುವಿನ ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ನಡೆದಿರುವುದು ಕೇಂದ್ರ ಗುಪ್ತಚರ ಇಲಾಖೆಯ ಸಂಪೂರ್ಣ ವಿಫಲತೆಯಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಯೋಧರ ಮೇಲೆ ಉಗ್ರರ ದಾಳಿ ನಡೆದು 49ಯೋಧರು ಮೃತರಾಗಿರುವುದು ನಮಗೆಲ್ಲ ತೀವ್ರ ನೋವನ್ನುಂಟು ಮಾಡಿದೆ.

ಹುತಾತ್ಮ ಯೋಧರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದರು. ಘಟನೆ ಪೂರ್ವನಿಯೋಜಿತವಾಗಿದ್ದರೂ ಗುಪ್ತಚರ ಇಲಾಖೆಗೆ ಮಾಹಿತಿಯೇ ಇಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಇದೇ 25ರಂದು ಹಾವೇರಿಯಲ್ಲಿ ಪಕ್ಷದ ಸಮಾವೇಶ ನಡೆಯುತ್ತಿದ್ದು ಇಂದು ಪೂರ್ವಭಾವಿ ಸಭೆ ನಡೆಸಲು ತೆರಳುತ್ತಿದ್ದೇನೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Facebook Comments

Sri Raghav

Admin