ಕಾಶ್ಮೀರದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಿದರೆ ಹುಷಾರ್ : ರಾಜನಾಥ್ ಸಿಂಗ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.17- ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಕಾಶ್ಮೀರದ ಯುವಕರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೋಮು ಸೌಹಾರ್ದತೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ತಮ್ಮದೇ ಆದ ರಾಜಕೀಯ ಪಕ್ಷದವರೂ ಈ ರೀತಿಯಲ್ಲಿ ತೊಡಗಿಸಿ ಕೊಂಡಿದ್ದರೂ ಕೂಡ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಕಿರುಕುಳ , ಬೆದರಿಕೆ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದ ನಂತರ ಆ ರಾಜ್ಯದಿಂದ ಬಂದಿರುವ ಎಲ್ಲಾ ಜನರಿಗೂ ಅಗತ್ಯ ಸುರಕ್ಷತೆ ಒದಗಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಹರಿಯಾಣದ ಮುಲಾನಾ ಪಂಚಾಯತ್‍ನ ಹಳ್ಳಿಯೊಂದರಲ್ಲಿ ಸುಮಾರು 125 ಕಾಶ್ಮೀರಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರನ್ನು ಹೊರ ಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಲೇಜಿನ ಡೀನ್ ನೀಡಿದ ದೂರಿನ ನಂತರ ಹಿಮಾಚಲ ಪ್ರದೇಶದಲ್ಲಿ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ತಾಸೇನ್ ಗುಲ್ ಎಂಬುವರನ್ನು ಬಂಧಿಸಲಾಗಿತ್ತು.

ಇಂತಹ ಪ್ರಕರಣಗಳ ವರದಿ ಪಡೆದ ನಂತರ ಜಮ್ಮ-ಕಾಶ್ಮೀರದಿಂದ ಬಂದಿರುವ ಜನರಿಗೆ ಸುರಕ್ಷತೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ಸೂಚನೆ ನೀಡಿದೆ.

Facebook Comments

Sri Raghav

Admin