ಪುಲ್ವಾಮ ಉಗ್ರರ ದಾಳಿ, ಬೆಂಗಳೂರಲ್ಲೂ ಹೈಅಲರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.17- ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಲರ್ಟ್ ಆಗಿದ್ದು, ನಗರದ ಲಾಡ್ಜ್‍ಗಳು, ವಸತಿ ಸಮ್ಮುಚ್ಚಯಗಳ ಮಾಲೀಕರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಫೆ.21ರಿಂದ ಯಲಹಂಕ ವಾಯುನೆಲೆಯಲ್ಲಿ ನಡೆಯುವ ಏರೋ ಇಂಡಿಯಾ ಪ್ರದರ್ಶನಕ್ಕೆ ಉಗ್ರರ ಕರಿನೆರಳು ತಾಕದಂತೆ ಎಚ್ಚರ ವಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಪಾರ್ಟ್‍ಮೆಂಟ್‍ನಲ್ಲಿ ಯಾರೆಲ್ಲಾ ವಾಸವಿದ್ದಾರೆ? ಏನು ವೃತ್ತಿ? ಯಾವ ಮೂಲದವರು ಹಾಗೂ ಅವರ ಆಧಾರ್‍ಕಾರ್ಡ್ ಮಾಹಿತಿ ನೀಡುವಂತೆ ಮನೆ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ನಗರದ ಕೆಲವು ಪ್ರದೇಶಗಳಲ್ಲಿ ಬೇರೆ ರಾಜ್ಯದಿಂದ ಬಂದವರೇ ಹೆಚ್ಚಾಗಿ ವಾಸವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಪ್ರದೇಶಗಳ ಠಾಣಾಧಿಕಾರಿಗಳಿಗೆ ಅವರ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Facebook Comments