ಶಿಡ್ಲಘಟ್ಟದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಶಿಡ್ಲಘಟ್ಟ,ಫೆ.17-ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ತಾಲೂಕಿನ ತುಮ್ಮನಹಳ್ಳಿ ಗ್ರಾಮದ ಅಮೃತವರ್ಷಿಣಿ(15) ಕೊಲೆಯಾಗಿರುವ ದುರ್ದೈವಿ. ಕಳೆದೆರಡು ದಿನಗಳ ಹಿಂದೆ ಅಮೃತವರ್ಷಿಣಿ ಕಾಣೆಯಾಗಿದ್ದಳು.

ಮುಂಜಾನೆ ಈಕೆಯ ಶವ ತುಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.ಈ ಘಟನೆಯಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಅದೇ ಗ್ರಾಮದ ಯುವಕ ಮುನಿರಾಜು ಎಂಬಾತ ಈಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಕೃಷಿ ಹೊಂಡದಲ್ಲಿ ಎಸೆದು ಪರಾರಿಯಾಗಿದ್ದಾನೆ ಎಂದು ಬಾಲಕಿ ಪೋಷಕರು ಶಿಡ್ಲಘಟ್ಟ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments