ಶಾಸಕ ಉಮೇಶ್ ಜಾಧವ್ ಹೇಳಿಕೆ ಸರಿಯಲ್ಲ : ಪ್ರಿಯಾಂಕಾ ಖರ್ಗೆ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಫೆ.17- ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಯಾವ ಪಕ್ಷ ದಿಂದಾರೂ ನನಗೆ ಟಿಕೆಟ್ ಸಿಕ್ಕರೆ ಸ್ಪರ್ಧೆ ಖಚಿತ ಎಂದು ಶಾಸಕ ಉಮೇಶ್ ಜಾಧವ್ ಹೇಳಿಕೆ ಸರಿಯಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ್ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಖರ್ಗೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಕೊಡಬೇಕು ಎಂಬುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಜಾಧವ್ ಅವರು ಬೇಕಿದ್ದರೆ ಲೋಕಸಭೆಗೆ ಸ್ಪರ್ಧಿಸಲಿ ಆದರೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದುಕೊಂಡು ಯಾವುದೇ ಪಕ್ಷದಿಂದಾರೂ ಪರವಾಗಿಲ್ಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು ತಪ್ಪು ಎಂದರು.

ಲೋಕಸಭೆಗೆ ಯಾರು ನಿಲ್ಲ ಬೇಕೆಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ನಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯವರನ್ನು ಬಿಟ್ಟು ಉಮೇಶ್ ಜಾಧವ್ ಅವರಿಗೆ ಟಿಕೆಟ್ ಕೊಟ್ಟರೂ ಸ್ವಾಗತಿಸುತ್ತೇವೆ.

ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್ ಕೈಯಲ್ಲಿದೆ ಎಂದು ಹೇಳಿದರು. ನಾವು ಉಮೇಶ್ ಜಾಧವ್ ಅವರನ್ನು ನಿರ್ಲಕ್ಷ್ಯ ಮಾಡಿಲ್ಲ ಅವರೇ ಕ್ಷೇತ್ರದಿಂದ ದೂರ ಉಳಿದುಕೊಂಡು ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ.

ಈಗಲೂ ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧ. ನಾವೆಲ್ಲಾ ಒಂದೇ ಕುಟುಂಬದ ಸದಸ್ಯರಾಗಿದ್ದು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುವುದು ಸಹಜ ಎಂದರು.

ಮಾಜಿ ಸಚಿವ ರೇವುನಾಯಕ ಬೆಳಮಗಿ ಕಾಂಗ್ರೆಸ್ ಪಕ್ಷಕ್ಕೆ ಹತ್ತಿರವಾಗುವ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ,ರಾಜ್ಯದ ಸಮ್ಮಿಶ್ರ ಸರ್ಕಾರ ಇರುವುದರಿಂದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕಟ್ಟಿಕೊಂಡ ಮೇಲೆ ಸಂಸಾರ ಮಾಡಬೇಕು ಎಂದರು.

Facebook Comments