ನಮ್ಮ ಸೈನಿಕರು ಉಗ್ರರಿಗೆ ತಕ್ಕ ಉತ್ತರ ನೀಡುತ್ತಾರೆ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.17- ನಮ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದರಿಂದ ಉಗ್ರರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಮಹಾತ್ಮ ಗಾಂಧಿ ಪ್ರತಿಮೆ ಬಳಿ, ಸೈನಿಕರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಧರಣಿ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಮಣಿಪುರದಲ್ಲಿ ನಮ್ಮ ಸೈನ್ಯದ ವಿರುದ್ಧ ದಾಳಿ ಮಾಡಿದ್ದ ನಾಗಾ ಉಗ್ರರರನ್ನು ಸೈನಿಕರು ಸದೆ ಬಡಿದಿದ್ದರು.

ಈಗ ಉಗ್ರರಿಗೆ ಸೇನೆ ತಕ್ಕ ಉತ್ತರ ನೀಡುವುದು ನಿಶ್ಚಿತ ಎಂದರು. ಪಾಕಿಸ್ತಾನ ಕಾಶ್ಮೀರದ ವಿಷಯವನ್ನು ಪ್ರಸ್ತಾಪ ಮಾಡುತ್ತಲೇ ಬಂದಿದೆ. ಪಾಕಿಸ್ತಾನ ಭಯೋತ್ಪಾದಕರನ್ನು ಹುಟ್ಟು ಹಾಕುವ ಕಾರ್ಖಾನೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕಾಶ್ಮೀರ ಉಳಿದಿದ್ದರೆ ಶ್ಯಾಮ್ ಪ್ರಸಾದ್ ಮುಖರ್ಜಿಯವರಿಂದ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಉಗ್ರರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳುವ ಮಾತು ಹೇಳಿದ್ದಾರೆ. ಹುತಾತ್ಮ ಯೋಧ ಗುರುವಿನ ಅಂತ್ಯಕ್ರಿಯೆಗೆ ಜನಸಾಗರವೇ ಸೇರಿತ್ತು, ಭಯೋತ್ಪಾದಕರ ವಿರುದ್ಧ ಹೋರಾಟ ದೇಶದಾದ್ಯಂತ ನಡೆಯುತ್ತಿದೆ.

ಭಯೋತ್ಪದಕರ ಹೋರಾಟಕ್ಕೆ ವಿರೋಧ ಪಕ್ಷಗಳು ಸಾಥ್ ನೀಡಿವೆ ಎಂದರು. ಇದೇ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ.

Facebook Comments

Sri Raghav

Admin