‘ಸಾಮಾಜಿಕ ಜಾಲತಾಣಗಳಲ್ಲಿ ನನ್ನ ತೇಜೋವಧೆ ಮಾಡಲಾಗುತ್ತಿದೆ’ : ಸೌಮ್ಯ ಶಿವಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.18- ಕೆಲವು ವಿಕೃತ ಮನಸ್ಸುಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಕಚೇರಿಯ ಕೆಲವೇ ಪೋಟೊಗಳನ್ನು ಬಳಸಿಕೊಂಡು ತಮ್ಮ ತೇಜೋವಧೆ ಮಾಡುತ್ತಿದ್ದಾರೆ ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ಸೌಮ್ಯ ಶಿವಕುಮಾರ್ ಆರೋಪಿಸಿದ್ದಾರೆ.

ಕೆಲವರು ಧರ್ಮ ಮತ್ತು ಭಾಷೆಯ ವಿಷಯವನ್ನಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಸತ್ಯವನ್ನು ಮರೆಮಾಚಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ಸತ್ಯಾಂಶವೇ ಬೇರೆ ಇದೆ.

ಕಳೆದ 2017-18ನೇ ಸಾಲಿನ ಅಧ್ಯಕ್ಷರಾಗಿದ್ದ ಜಾಕೀರ್ ಅವರು ಉರ್ದು ಧಾರ್ಮಿಕ ಪಟದ ಪಕ್ಕದಲ್ಲಿ ಲಕ್ಷ್ಮಿ, ಸರಸ್ವತಿ ಮತ್ತು ಗಣೇಶ ದೇವರುಗಳ ಪೋಟೋವನ್ನು ಮೊದಲೇ ಹಾಕಿಸಿದ್ದರು. ತಾವು ಅಧಿಕಾರ ಸ್ವೀಕರಿಸಿದ ನಂತರ ಯಾವುದೆ ಪೋಟೋಗಳನ್ನು ಹಾಕುವುದಾಗಲಿ, ತೆಗೆಯುವುದಾಗಲಿ ಮಾಡಿಲ್ಲ.

ತಮ್ಮ ಶಾಸಕರಾದ ಎನ್.ಎ.ಹ್ಯಾರೀಸ್ ಅವರ ಪೋಟೋವನ್ನು ಹೊಸದಾಗಿ ಸೇರ್ಪಡೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಆದರೆ ಕೆಲವರು ತಮ್ಮಕಚೇರಿಯಲ್ಲಿ ಕನ್ನಡ ಮಾಯವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ.ಇಂತಹ ವಿಕೃತ ಮನಸ್ಸುಗಳನ್ನು ಪ್ರೋತ್ಸಾಹಿಸಬೇಡಿ ಎಂದು ಸೌಮ್ಯ ಶಿವಕುಮಾರ್ ಮನವಿ ಮಾಡಿದ್ದಾರೆ.

Facebook Comments