ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಬೈಕ್ ಕಳ್ಳತನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.18- ಸಿಲಿಕಾನ್ ಸಿಟಿಯಲ್ಲಿ ಬೈಕ್‍ಗಳ ಕಳ್ಳತನ ನಡೆಯುತ್ತಲೇಯಿದ್ದು ನಿನ್ನೆ ಮೂರು ಬೆಲೆಬಾಳುವ ಬೈಕ್‍ಗಳನ್ನು ಕಳ್ಳತನ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದಂತಹ ಬೈಕ್‍ಗಳನ್ನು ಖತರ್ನಾಕ್ ಕಳ್ಳರು ಕಳ್ಳತನ ಮಾಡಿದ್ದಾರೆ.

ಕಾಮಾಕ್ಷಿ ಪಾಳ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ಬೈಕ್‍ಗಳೆ ಕಳ್ಳರ ಟಾರ್ಗೆಟ್ ಆಗಿದೆ. ಕಳ್ಳರು ಮೂರು ಬೈಕ್‍ಗಳನ್ನು ಕದ್ದೊಯ್ಯತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವ್ಯಾಪ್ತಿಯಲ್ಲಿ ಈ ಹಿಂದೆಯೂ ಬೈಕ್‍ಗಳ ಕಳ್ಳತನ ನಡೆದಿದ್ದು ಬೈಕ್‍ಗಳ ವಾರಸುದಾರರು ಪೊಲೀಸರ ಮೊರೆ ಹೋಗಿದ್ದರೂ ಇನ್ನೂ ಬೈಕ್‍ಗಳು ಪತ್ತೆಯಾಗಿಲ್ಲ. ಈ ಬಗ್ಗೆ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments