ಏರ್‍ಸೆಲ್-ಮ್ಯಾಕ್ಸಿಸ್ ಕೇಸ್ : ಚಿದು, ಕಾರ್ತಿಗೆ ಮಾ.8ವರೆಗೆ ರಿಲೀಫ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.18-ಏರ್‍ಸೆಲ್-ಮ್ಯಾಕ್ಸಿಸ್ ಹಗರಣದಲ್ಲಿ ಕೇಂದ್ರದ ಮಾಜಿ ಸಚಿವ-ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಅವರ ಪುತ್ರ-ಉದ್ಯಮಿ ಕಾರ್ತಿ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ಮಂಜೂರು ಮಾಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ದೆಹಲಿಯ ನ್ಯಾಯಾಲಯವೊಂದು ಮಾ. 8ರವರೆಗೆ ವಿಸ್ತರಿಸಿದೆ.

ಈ ಪ್ರಕರಣದ ಸಂಬಂಧ ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ(ಇಡಿ) ಚಿದು ಮತ್ತು ಕಾರ್ತಿ ವಿರುದ್ದ ಪ್ರಕರಣ ದಾಖಲಿಸಿತ್ತು.
ಈ ಪ್ರಕರಣದಲ್ಲಿ ಮಾ.5,6,7 ಮತ್ತು 12ರಂದು ವಿಚಾರಣೆಗೆ ಒಳಪಡುವಂತೆ ಕಾರ್ತಿಗೆ ತಾನು ಈಗಾಗಲೇ ಸೂಚಿಸಿರುವುದಾಗಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಅವರಿಗೆ ತಿಳಿಸಿದರು.

ಸುಪ್ರೀಂಕೋರ್ಟ್‍ನ ನಿರ್ದೇಶನದಂತೆ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಗೆ ತಿಳಿಸಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಹೇಳಿತು.

ಏರ್‍ಸೆಲ್-ಮ್ಯಾಕ್ಸಿಸ್ ವ್ಯವಹಾರಕ್ಕೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿ(ಎಫ್‍ಐಪಿಬಿ) ಅನುಮತಿ ನೀಡುವಲ್ಲಿ ಕೋಟ್ಯಂತರ ರೂ.ಗಳ ಅಕ್ರಮ ಅವ್ಯವಹಾರಗಳು ನಡೆದಿದೆ ಎನ್ನಲಾದ ಹಗರಣ ಇದಾಗಿದೆ.

Facebook Comments