80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರು ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಫೆ.15-ಕಾರು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕಳಶ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಕ್ಷಿಣ ಕನ್ನಡದ ಸುಳ್ಯಾ ನಿವಾಸಿಗಳಾದ ಆರು ಮಂದಿ ಯಕ್ಷಗಾನ ನೋಡಲು ಕಾರಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.  ಕಳಶ ಸಮೀಪದ ಹಿರೇಬೈಲು ಗ್ರಾಮದ ಬಳಿ ತೆರಳುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ 80 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಆರು ಜನರ ಪೈಕಿ ನಾಲ್ವರು ಕಾರು ಉರುಳಿದ ರಭಸಕ್ಕೆ ಕಾರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಳಸ ಆಸ್ಪತ್ರೆಗೆ ದಾಖಿಸಲಾಗಿದೆ.   ಮೂಡಿಗೆರೆ ತಾಲೂಕು ಕಳಸದ ಸಮೀಪ ಹಿರೇಬೈಲು ಗ್ರಾಮದಲ್ಲಿ ಸಂಭವಿಸಿದ ಘಟನೆಯಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರುಸ್ಥಳದಲ್ಲೇ ಸಾವನ್ನಪ್ಪಿದ್ದು ಇಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದವರೆನ್ನಲಾಗಿದ್ದು ಅವರೆಲ್ಲಾ ಯಕ್ಷಗಾನ ವೀಕ್ಷಣೆಗಾಗಿ ತೆರಳುತ್ತಿದ್ದರು ಎನ್ನಲಾಗಿದೆ.

Facebook Comments