25ಕ್ಕೆ ಬೃಹತ್ ಉದ್ಯೋಗ ಮೇಳ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.18- ಮೂರು ಸಾವಿರ ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಫೆ.25ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗ ಮೇಳದ ವೆಬ್‍ಸೈಟ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೈಸೂರು ಮತ್ತು ಚಾಮರಾಜನಗರದಲ್ಲಿರುವ ನಿರುದ್ಯೋಗಿ ಯುವ ಜನರ ಅನುಕೂಲಕ್ಕಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗಾಗಿ 15 ಕೌಂಟರ್‍ಗಳನ್ನು ತೆರೆಯಲಾಗಿದ್ದು, 50 ಸ್ಟಾಲ್‍ಗಳನ್ನು ಹಾಕಲಾಗುತ್ತದೆ. ಎಸ್ಸೆಸ್ಸೆಲ್ಸಿಯಿಂದ ಹಿಡಿದು ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಇದು ಅನುಕೂಲವಾಗಲಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಾತನಾಡಿ, ಬೃಹತ್ ಉದ್ಯೋಗ ಮೇಳದ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು. ನಿರುದ್ಯೋಗಿಗಳು ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ನ www.mysuruchnagarjobfair.com ನಲ್ಲಿ ಪಡೆಯಬಹುದು.

Facebook Comments