ಕಾಸರಗೋಡುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಗೆ ರಾಹುಲ್ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.18-ಕೇರಳದ ಕಾಸರಗೋಡುವಿನಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯನ್ನು ಬರ್ಬರ ಕೊಲೆ ಮತ್ತು ಆಘಾತಕಾರಿ ಎಂದು ಬಣ್ಣಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಹಂತಕರನ್ನು ನ್ಯಾಯಕ್ಕೆ ಒಪ್ಪಿಸುವ ತನಕ ತಮ್ಮ ಪಕ್ಷವು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ರಾತ್ರಿ ಕರ್ನಾಟಕ-ಕೇರಳ ಗಡಿಯ ಕಾಸರಗೋಡುವಿನಲ್ಲಿ ದುಷ್ಕರ್ಮಿಗಳು ಕೃಪೇಶ್ ಮತ್ತು ಶರತ್ ಲಾಲ್ ಎಂಬ ಯುವ ಕಾರ್ಯಕರ್ತರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಈ ಕೃತ್ಯದ ಬಗ್ಗೆ ಟ್ವಿಟರ್‍ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್, ಕಾಸರಗೋಡುವಿನಲ್ಲಿ ನಮ್ಮ ಯುವ ಕಾಂಗ್ರೆಸ್ ಕುಟುಂಬದ ಇಬ್ಬರು ಸದಸ್ಯರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹತರಾದ ಯುವಕರ ಕುಟುಂಬಗಳಿಗೆ ಕಾಂಗ್ರೆಸ್ ನೈತಿಕ ಬೆಂಬಲ ನೀಡಲಿದೆ.

ಹಂತಕರನ್ನು ಕಾನೂನು ಕುಣಿಕೆಗೆ ಒಳಪಡಿಸುವ ತನಕ ಪಕ್ಷ ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯನ್ನು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲೆ ಉಗ್ರವಾಗಿ ಖಂಡಿಸಿದ್ದಾರೆ.

ತಿರುವನಂತಪುರ ವರದಿ: ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಕಾಂಗ್ರೆಸ್ ಇಂದು ಕೇರಳ ಬಂದ್‍ಗೆ ಕರೆ ಕೊಟ್ಟಿದ್ದು, ವಿವಿಧೆಡೆ ಹರತಾಳ ನಡೆಯುತ್ತಿದೆ. ಕೃಪೇಶ್ ಮತ್ತು ಶರತ್‍ಲಾಲ್ ಹತ್ಯೆಗೆ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆ ಮೆರವಣಿಗೆ ನಡೆಸಿದೆ.

Facebook Comments

Sri Raghav

Admin