ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಆನೇಕಲ್, ಫೆ.18-ಸ್ನೇಹಿತರ ಜೊತೆಗೂಡಿ ಪಾರ್ಟಿ ಮಾಡಲು ಬಂದಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ.

ಸುಮಾರು 30 ವರ್ಷದವರಂತೆ ಕಾಣುವ ಈ ಯುವಕ ಕಳೆದ ರಾತ್ರಿ ಹೊಂಡಾ ಡಿಯೋ ಬೈಕ್‍ನಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಆನೇಕಲ್ ವ್ಯಾಪ್ತಿಯ ಮುತ್ತಗಟ್ಟಿ ಗ್ರಾಮದ ರಸ್ತೆ ಬಳಿ ಬಂದಿದ್ದನು. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿದೆ. ವಿಕೋಪಕ್ಕೆ ತಿರುಗಿದಾಗ ಯುವಕನ ತಲೆ ಮೇಲೆ ಕಲ್ಲು ಎತ್ತಿಹ ಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ರಸ್ತೆ ಬದಿ ಯುವಕನ ಕೊಲೆಯಾಗಿರುವುದನ್ನು ಗಮನಿಸಿದ ದಾರಿಹೋಕರು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕೊಲೆಯಾದ ಯುವಕನ ವಾರಸುದಾರರಿಗಾಗಿ ಶೋಧ ಕೈಗೊಂಡಿದ್ದಾರೆ. ಈ ಸ್ಥಳದಲ್ಲಿ ಬಂದು ಪಾರ್ಟಿ ಮಾಡಿದ ನಂತರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Facebook Comments