ಬಿಎಸ್‍ಎನ್‍ಎಲ್ ನೌಕರರ ಮುಷ್ಕರ, ಕಚೇರಿಗಳಿಗೆ ಬೀಗ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.19- ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಬಿಎಸ್‍ಎನ್‍ಎಲ್ ಸಂಸ್ಥೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ರಾಜ್ಯಾದ್ಯಂದ ಇಂದು ಬಿಎಸ್‍ಎನ್ ನೌಕರರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಬಿಎಸ್‍ಎನ್‍ಎಲ್ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಿಬ್ಬಂದಿ ಮುಷ್ಕರ ನಡೆಸಿದರು.

ಬಿಎಸ್‍ಎನ್‍ಎಲ್ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಮೂರು ಲಕ್ಷ ಉದ್ಯೋಗ ಕಳೆದು ಕೊಳ್ಳುವ ಭೀತಿಯಲ್ಲಿದ್ದಾರೆ. ನೌಕರರ ಹಿತದೃಷ್ಟಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಬಿಎಸ್‍ಎನ್‍ಎಲ್ ಸಂಸ್ಥೆಗೆ 4 ಜಿ ಸೇವೆಯನ್ನು ನೀಡದೆ, ಖಾಸಗಿ ಜಿಯೋ ಸಂಸ್ಥೆ ಯನ್ನು ಪ್ರೋತ್ಸಾಹಿಸುತ್ತಿದೆ.

ಕಡಿಮೆ ತಂತ್ರಾಂಶದಿಂದ ಗುಣಮಟ್ಟದ ಸೇವೆಯನ್ನು ನೀಡಲು ಬಿಎಸ್‍ಎನ್‍ಎಲ್ ಸಿಬ್ಬಂದಿ ಪ್ರಯತ್ನ ಮಾಡುತ್ತಿದ್ದರೂ, ನಷ್ಟದಲ್ಲಿದೆ ಎಂದು ಸಂಸ್ಥೆಯನ್ನು ಮುಚ್ಚಲು ಸರ್ಕಾರ ಹುನ್ನಾರ ನಡೆಸಿದೆ ಎಂದು ನೌಕರರು ಆರೋಪಿಸಿದ್ದಾರೆ.

ಬಿಎಸ್‍ಎನ್‍ಎಲ್ ನೌಕರರಿಗೆ 3ನೇ ವೇತನ ಆಯೋಗದ ಶಿಫಾರಸ್ಸಿನ್ವಯ ವೇತನ ಪರಿಷ್ಕರಣೆ ಮಾಡಬೇಕು, ಪಿಂಚಣಿ ಪರಿಷ್ಕರಣೆ ಮಾಡಬೇಕು, 2ನೇ ವೇತನ ಆಯೋಗದ ತಾರತಮ್ಯವನ್ನು ನಿವಾರಣೆ ಮಾಡಬೇಕೆಂದು ಸಿಬ್ಬಂದಿ ಒತ್ತಾಯಿಸಿದ್ದಾರೆ. ಮೂರು ದಿನವೂ ನೌಕರರು ಕೆಲಸವನ್ನು ಬಹಿಷ್ಕರಿಸಲಿದ್ದು, ಕೇಂದ್ರ ಸರ್ಕಾರ ತ್ವರಿತವಾಗಿ ಬಿಎಸ್‍ಎನ್‍ಎಲ್ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ನೌಕರರು ಮುಷ್ಕರಕ್ಕೆ ಮುಂದಾದಾಗ ವದಂತಿಗಳನ್ನು ಹಬ್ಬಿಸುವ ಮೂಲಕ ಕೆಲವರು ಮುಷ್ಕರ ನಿರತರ ಸ್ಥೈರ್ಯವನ್ನು ಕುಗ್ಗಿಸುವ ಕೆಲಸವನ್ನು ಮಾಡು ತ್ತಿದ್ದು, ನೌಕರರು ಅಂತಹ ವದಂತಿ ಗಳಿಗೆ ಕಿವಿಗೊಡಬಾರದು ಎಂದು ಯೂನಿಯನ್ ಮುಖಂಡರು ಮನವಿ ಮಾಡಿದ್ದಾರೆ.

Facebook Comments