ರಸ್ತೆ ಬದಿ ನಿಂತವರಿಗೆ ಗುದ್ದಿದ ಶಾಸಕ ಸಿ.ಟಿ. ರವಿ ಕಾರು , ಇಬ್ಬರ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು. ಫೆ.19 : ಬಿ.ಜೆ.ಪಿ. ಶಾಸಕ ಸಿ.ಟಿ. ರವಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಊರ್ಕೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.

ಅಪಘಾತದಲ್ಲಿ ಶಾಸಕ ರವಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಳಿಕ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಶಶಿಕುಮಾರ್ ಮತ್ತು ಸುನಿಲ್ ಗೌಡ ಎಂದು ಗುರುತಿಸಲಾಗಿದೆ. ಮತ್ತೊಬ್ಬನಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

ಎರಡು ಕಾರುಗಳಲ್ಲಿ 13 ಜನ ಗೆಳೆಯರು ಪ್ರವಾಸಕ್ಕೆಂದು ಹೋಗಿದ್ದರು. ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಹೆದ್ದಾರಿ ಸಮೀಪ ತಮ್ಮ ಕಾರುಗಳನ್ನು ನಿಲ್ಲಿಸಿ ರಸ್ತೆಬದಿಯಲ್ಲಿ ನಿಂತಿದ್ದ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಶಾಸಕ ಸಿ.ಟಿ.ರವಿ ಅವರ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಅಪ್ಪಳಿಸಿತು. ಈ ಸಂದರ್ಭದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರು.

ಘಟನೆಯ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಾಸಕರ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin