‘ನನ್ನಿಂದ ಪವಾಡವಾಗುತ್ತದೆ ಎಂದು ನಿರೀಕ್ಷೆ ಇಟ್ಟುಕೊಳ್ಳಬೇಡಿ’ : ಪ್ರಿಯಾಂಕಾ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.19- ಮುಂಬರುವ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷ ಸಂಘಟನೆಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ನನ್ನಿಂದ ಪವಾಡವಾಗುತ್ತದೆ ಎಂದು ನಿರೀಕ್ಷೆ ಇಟ್ಟುಕೊಳ್ಳಬೇಡಿ. ಬದಲಿಗೆ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧಿಸಿದರೆ ಮಾತ್ರ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲು ಸಾಧ್ಯ ಎಂದು ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧಿಸಿದರೇ ಮಾತ್ರ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲು ಸಾಧ್ಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಉತ್ತರ ಪ್ರದೇಶದ ಬಂದೇಲ್ ಖಂಡದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರಿಗೆ ಹೊರ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಂತರದ ಗುರುದ್ವಾರದ ರಾಕಗಂಜ್ ರೋಡ್‍ನಲ್ಲಿ ನಡೆದ ಬೂತ್ ಮಟ್ಟದ ಪಕ್ಷ ಸಂಘಟನೆಯನ್ನು ಪರಿಶೀಲಿಸಿದರು.

Facebook Comments

Sri Raghav

Admin