ಪಂಜಾಬ್’ನಲ್ಲಿ ಪೆಟ್ರೋಲ್ ದರ 5 ರೂ. ಇಳಿಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ಚಂಡೀಗಢ, ಫೆ.19- ಪಂಜಾಬ್ ಸರ್ಕಾರ ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಪೆಟ್ರೋಲ್ ಬೆಲೆ ಲೀಟರ್‍ಗೆ 5 ರೂ. ಹಾಗೂ ಡೀಸೆಲ್ ಲೀಟರ್‍ಗೆ 1 ರೂ. ಇಳಿಕೆ ಮಾಡಿದೆ.

ಪಂಜಾಬ್ ಹಣಕಾಸು ಸಚಿವ ಮನ್‍ಪ್ರೀತ್ ಸಿಂಗ್ ಬಾದಲ್ ನಿನ್ನೆ ತಮ್ಮ ಬಜೆಟ್ ಮಂಡನೆ ವೇಳೆ ಈ ವಿಷಯ ತಿಳಿಸಿದ್ದಾರೆ. ಪಂಜಾಬ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕಿದೆ.

ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ 5 ರೂ. ಹಾಗೂ ಡೀಸೆಲ್ ಬೆಲೆ 1 ರೂ. ಇಳಿಕೆಯಾಗಲಿದೆ. ನೂತನ ದರ ನಿನ್ನೆ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ ಎಂದು ಬಾದಲ್ ಹೇಳಿದ್ದಾರೆ.

ಕಳೆದ ಐದು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ನಾಲ್ಕು ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಪೆಟ್ರೋಲ್ ಬೆಲೆ 15 ರಿಂದ 16 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 13 ರಿಂದ 14 ಪೈಸೆ ಏರಿಕೆಯಾಗಿದೆ.

Facebook Comments