ತಿಂಗಳಲ್ಲಿ 2ನೇ ವಿಮಾನ ದುರಂತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.19- ಇಂದು ಯಲಹಂಕ ಸಮೀಪದ ಗಂಟಿಗಾನಹಳ್ಳಿ ಬಳಿ ಸೂರ್ಯಕಿರಣ್ ಯುದ್ಧ ವಿಮಾನ ಪತನಗೊಂಡಿರುವುದು ಈ ತಿಂಗಳಿನಲ್ಲಿ ಇದು 2ನೇ ಘಟನೆಯಾಗಿದೆ.  ಕಳೆದ ಫೆ.2ರಂದು ಬೆಂಗಳೂರಿನ ಎಚ್‍ಎಎಲ್ ಸಮೀಪದ ಯಮಲೂರು ಬಳಿ ಮಿರಾಜ್-2000 ಯುದ್ಧ ವಿಮಾನ ಪತನಗೊಂಡು ಇಬ್ಬರು ಪೈಲೆಟ್‍ಗಳು ಸಾವನ್ನಪ್ಪಿದ್ದರು.ಈ ಘಟನೆ ಮಾಸುವ ಮುನ್ನವೇ ಪುನಃ ಮತ್ತೊಂದು ಘಟನೆ ನಡೆದಿರುವುದು ಆಘಾತವನ್ನುಂಟು ಮಾಡಿದೆ.

ಸಾಮಾನ್ಯವಾಗಿ ಎಚ್‍ಎಎಲ್‍ನಿಂದ ನಿರ್ಮಿತವಾಗುವ ಸೂರ್ಯ ಕಿರಣ್, ತೇಜಸ್, ಮಿರಾಜ್ ಸೇರಿದಂತೆ ಲಘು ಯುದ್ಧ ವಿಮಾನಗಳು ಈವರೆಗೂ ಅಪಘಾತಕ್ಕೀಡಾದ ನಿದರ್ಶನಗಳಿಲ್ಲ. ಹೀಗಾಗಿಯೇ ಈ ವಿಮಾನಗಳಿಗೆ ವಿದೇಶದಿಂದಲೂ ಬೇಡಿಕೆ ಇದೆ.

ಶ್ರೀಲಂಕಾ,ದಕ್ಷಿಣ ಆಫ್ರಿಕಾ, ಫ್ರಾನ್ಸ್, ರಷ್ಯಾ ಸೇರಿದಂತೆ ಅನೇಕ ಮುಂದುವರೆದ ರಾಷ್ಟ್ರಗಳು ಕೂಡ ರಾಷ್ಟ್ರಗಳು ಸೂರ್ಯಕಿರಣ್, ತೇಜಸ್‍ದಂತಹ ಯುದ್ಧ ವಿಮಾನಗಳನ್ನು ನೀಡುವಂತೆ ಎಚ್‍ಎಎಲ್‍ಗೆ ಬೇಡಿಕೆ ನೀಡುತ್ತವೆ.ಆದರೆ ಇಂದು ಸೂರ್ಯ ಕಿರಣ್ ಯುದ್ಧ ವಿಮಾನ ನಾಳೆಯ ವೈಮಾನಿಕ ಪ್ರದರ್ಶನಕ್ಕೆ ತಾಲೀಮು ನಡೆಸುವ ವೇಳೆ ಪರಸ್ಪರ ಡಿಕ್ಕಿಯಾಗಿ ಪತನಗೊಂಡು ಓರ್ವ ಪೈಲೆಟ್ ಸಾವನ್ನಪ್ಪಿದ್ದಾನೆ.

ಫೆ.2ರಂದು ತಾಂತ್ರಿಕ ದೋಷದಿಂದ ವಾಯುಪಡೆಯ ಮಿರಾಜ್-2000 ಸಂಖ್ಯೆಯ ಯುದ್ಧ ವಿಮಾನ ಬೆಂಗಳೂರಿನ ಎಚ್‍ಎಎಲ್‍ನ ಯಮಲೂರು ಬಳಿ ಪತನಗೊಂಡು ಇಬ್ಬರು ಪೈಲಟ್‍ಗಳು ಸಾವನ್ನಪ್ಪಿದ್ದರು. ಆದರೆ ಪೈಲಟ್‍ಗಳು ತಮ್ಮ ಜೀವತೆತ್ತು ಸಂಭವಿಸಬಹುದಾದ ಭಾರೀ ಅವಘಡವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದರು.

ಪ್ರಾಯೋಗಿಕ ಹಾರಾಟ ವೇಳೆ ಈ ಅವಘಡ ಸಂಭವಿಸಿದ್ದು, ರನ್‍ವೇಯಲ್ಲಿ ಹಾರಾಟ ನಡೆಸಿದ್ದ ವಿಮಾನ ಟೇಕಾಫ್ ಆಗಿದ್ದರೆ ವಸತಿ ಹೆಚ್ಚಾಗಿರುವ ಪ್ರದೇಶದಲ್ಲಿ ಬೀಳುವ ಸಾಧ್ಯತೆ ಇತ್ತು. ಆದರೆ ಇದನ್ನು ಮನಗಂಡ ಫೈಲಟ್‍ಗಳು ವಿಮಾನ ಎತ್ತರಕ್ಕೆ ಟೇಕಾಫ್ ಮಾಡದಿರಲು ನಿರ್ಧರಿಸಿ ಹೊರ ಬರಲು ಪ್ರಯತ್ನಿಸಿದ್ದರು.

ಅಂತಿಮ ಕ್ಷಣದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದ ಪೈಲಟ್ ಗಳು ಪ್ಯಾರಚೂಟ್ ಬಳಸಿ ಹಾರಲು ಯತ್ನಿಸಿದ್ದರು. ಆದರೆ ಆ ವೇಳೆಗೆ ವಿಮಾನ ಸ್ಫೋಟಗೊಂಡಿತ್ತು. ಪರಿಣಾಮ ಸಿದ್ದಾರ್ಥ್ ನೇಗಿ (31), ಸಮೀರ್ ಅಬ್ರೋಲ್(33) ಜೀವ ಕಳೆದುಕೊಂಡಿದ್ದಾರೆ.

ಸಮೀರ್ ಬೆಂಕಿ ಹೊತ್ತಿಕೊಂಡಿದ್ದ ಪ್ಯಾರಚೂಟ್ ಮೇಲೆಯೇ ಬಿದ್ದ ಪರಿಣಾಮ ಸುಟ್ಟು ಕರಕಲಾದರೆ, ತೀವ್ರ ಗಾಯಗೊಂಡಿದ್ದ ನೇಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು.
ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಒಂದೊಮ್ಮೆ ವಿಮಾನ ಜನ ವಸತಿ ಪ್ರದೇಶದಲ್ಲಿ ಪತನವಾಗಿದ್ದರೆ ಭಾರೀ ಅವಘಡ ಸಂಭವಿಸುತ್ತಿತ್ತು ಎಂದು ತಿಳಿಸಿದ್ದಾರೆ.

ಅಲ್ಲದೇ ಈ ಕುರಿತು ಮಾಹಿತಿ ನೀಡಿರುವ ಎಚ್‍ಎಎಲ್ ಅಧಿಕಾರಿಯೊಬ್ಬರು ರನ್‍ವೇಯಲ್ಲಿಯೇ ವಿಮಾನದ ಟೈರ್ ಕಳಚಿ ಬಿದ್ದ ಪರಿಣಾಮ ಮುಂಭಾಗ ರನ್ ವೇಗೆ ಉಜ್ಜಿ ಬೆಂಕಿ ಕಿಡಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ವಿವರಿಸಿದ್ದಾರೆ. ವಿಮಾನ ಸ್ಫೋಟಗೊಂಡ ಅಲ್ಪ ದೂರದಲ್ಲೇ ಜನ ವಸತಿ ಪ್ರದೇಶಗಳಿದ್ದು, ಶಾಲೆ, ಟೆಕ್ ಪಾರ್ಕ್, ರಸ್ತೆಗಿಳಿದ್ದು, ಜನನಿಬಿಡ ಪ್ರದೇಶವಾಗಿದೆ. ವಿಮಾನವನ್ನು ರನ್ ವೇಯಿಂದ ಟೇಕಾಫ್ ಆಗಿದ್ದರೆ ವಸತಿ ಪ್ರದೇಶದಲ್ಲಿ ಉರುಳುವ ಸಾಧ್ಯತೆ ಇತ್ತು.

Facebook Comments