ರೆಸಾರ್ಟ್’ನಲ್ಲಿ ಫೈಟ್ ಮಾಡಿ ಎಸ್ಕೇಪ್ ಆಗಿದ್ದ ಶಾಸಕ ​ ಗಣೇಶ್​ ಕೊನೆಗೂ ಅರೆಸ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು. ಫೆ.20 : ಶಾಸಕ ಆನಂದ್ ಸಿಂಗ್ ಮೇಲೆ ಜನವರಿ 20ರ ರಾತ್ರಿ ಈಗಲ್ಟನ್ ರೆಸಾರ್ಟ್ನಲ್ಲಿ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕೊನೆಗೂ ಅರೆಸ್ಟ್ ಆಗಿದ್ದಾರೆ.

ಘಟನೆಯ ನಂತ್ರ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ತೆಗೆದುಕೊಂಡಿದ್ದರು.

ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್ರನ್ನು ಮುಂಬೈನಲ್ಲಿ ಅರೆಸ್ಟ್ ಮಾಡಿದ್ದಾರೆ. ಇಂದು ರಾತ್ರಿ ವೇಳೆಗೆ ಗಣೇಶ್ರನ್ನು ರಾಮನಗರಕ್ಕೆ ಕರೆತರುವ ಅಂದಾಜಿದ್ದು, ಕೋರ್ಟ್ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.  ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಶಾಸಕ ಗಣೇಶ್ ಬಂಧನಕ್ಕೆ ಒತ್ತಡ ಹೆಚ್ಚಾಗಿತ್ತು.

ಬಿಜೆಪಿ ಸೇರ್ಪಡೆ ಸಾಧ್ಯತೆ : ಬರುವ ಮಾರ್ಚ್ 1ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಾವೇಶದಲ್ಲಿ ಹಾಲಿ ಶಾಸಕ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಈ ಬಗ್ಗೆ ಇದುವರೆಗೆ ಅಧಿಕೃತ ಮಾಹಿತಿ ಹೊರಬೀಳದಿದ್ದರೂ ಇಂಥದೊಂದು ಸುದ್ದಿ ಬಿಜೆಪಿ ಪಾಳೆಯದಲ್ಲಿ ಸುಳಿದಾಡುತ್ತಿದೆ. ಚಿಂಚೋಳಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಜಾಧವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಕಲಬುರ್ಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕಳೆದ ಹಲವು ದಿನಗಳಿಂದ ದಟ್ಟವಾಗಿ ಕೇಳಿಬರುತ್ತಿದೆ.

Facebook Comments

Sri Raghav

Admin