ಶಾಸಕ ಸಿ.ಟಿ.ರವಿ ಕಾರು ಅಪಘಾತ ಪ್ರಕರಣ, ಡ್ರೈವರ್ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್, ಫೆ.20- ಶಾಸಕ ಸಿ.ಟಿ.ರವಿ ಅವರಿದ್ದ ಕಾರು ರಸ್ತೆ ಬದಿ ಮೂತ್ರ ವಿಸರ್ಜನೆಗೆ ತೆರಳಿದ್ದ ಇಬ್ಬರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪಟ್ಟಣದ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಳ್ಳಾರಿ ಮೂಲದ ಆಕಾಶ್ ಅಲಿಯಸ್ ರುದ್ರೇಶ್ (30) ಬಂಧಿತ ಕಾರು ಚಾಲಕ. ನಿನ್ನೆ ಬೆಳಗಿನ ಜಾವ 1.30ರ ಸಮಯದಲ್ಲಿ ಚಿಕ್ಕಮಗಳೂರು ಕಡೆಯಿಂದ ತೆರಳುತ್ತಿದ್ದ ಶಾಸಕ ಸಿ.ಟಿ.ರವಿ ಅವರಿದ್ದ ಕಾರು ರಾ.ಹೆ.75ರ ಟರ್ಕೇನಹಳ್ಳಿ ಗೇಟ್ ಬಳಿ ನೋಡನೋಡುತ್ತಿದ್ದಂತೆ ರಸ್ತೆ ಬದಿಯಿದ್ದ ಇಬ್ಬರು ಯುವಕರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದರು.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪಘಾತ ಸಂಭವಿಸಿದಾಗ ಚಾಲಕ ಆಕಾಶ್‍ಗೂ ಸಣ್ಣಪುಟ್ಟ ಗಾಯಗಳಾಗಿರುವುದರಿಂದ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು.

ರಾತ್ರಿ ಕಾರು ಚಾಲಕನನ್ನು ಪಟ್ಟಣ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments