ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು.ಫೆ. 21: ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಮಾ.1ರಿಂದ ಪ್ರಾರಂಭವಾಗುತ್ತಿದ್ದು, ಎಲ್ಲ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೆ ಪರೀಕ್ಷಾ ಪ್ರವೇಶಪತ್ರ ತೋರಿಸಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಲಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಕೆಎಸ್ಸಾರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin